ಪ್ಯಾರಿಸ್, ಸೆ.8(DaijiworldNews/AK):2024ರ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತ ಐತಿಹಾಸಿಕ 29 ಪದಕಗಳನ್ನು ಪಡೆಯುವ ಮೂಲಕ ದಾಖಲೆ ನಿರ್ಮಿಸಿದೆ. ಈ ಮೂಲಕ ಪದಕ ಪಟ್ಟಿಯಲ್ಲಿ ಭಾರತ 18ನೇ ಸ್ಥಾನ ಪಡೆದುಕೊಂಡಿದೆ. ಇದು ಭಾರತದ ಐತಿಹಾಸಿಕ ಸಾಧನೆಯೂ ಆಗಿದೆ.
ಚೀನಾ 219 ಪದಕಗಳನ್ನು ಗೆಲ್ಲುವ ಮೂಲಕ ಮೊದಲ ಸ್ಥಾನ ಪಡೆದರೆ, ಗ್ರೇಟ್ ಬ್ರಿಟನ್ 122, ಅಮೆರಿಕ 104 ಪದಕಗಳನ್ನು ಪಡೆದು ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನ ಗಿಟ್ಟಿಸಿಕೊಂಡಿವೆ.ಭಾರತವು 7 ಚಿನ್ನ, 9 ಬೆಳ್ಳಿ ಮತ್ತು 13 ಕಂಚಿನ ಪದಕಗಳನ್ನು ಪಡೆದು ಪ್ಯಾರಾಲಿಂಪಿಕ್ಸ್ನಲ್ಲಿ ಹೊಸ ದಾಖಲೆ ಬರೆಯಿತು. ಕಳೆದ ಟೋಕಿಯೊ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತ 19 ಪದಕಗಳನ್ನು ಗಳಿಸಿತ್ತು. ಈ ಭಾರೀ 29 ಪದಕಗಳೊಂದಿಗೆ ಭಾರತ ಉತ್ತಮ ಪ್ರದರ್ಶನ ನೀಡಿದೆ.