ಇಂಗ್ಲೆಂಡ್, ಸೆ.10(DaijiworldNews/AA): ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್ ಗೆದ್ದುಕೊಂಡಿದೆ. ಈ ಸರಣಿಯಲ್ಲಿ ಜೋ ರೂಟ್ ಅವರು ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದು, ಈ ಮೂಲಕ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ.
ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಇಂಗ್ಲೆಂಡ್ 2-1 ಅಂತರದಿಂದ ಗೆದ್ದಿದೆ. ಈ ಸರಣಿಯಲ್ಲಿ ಒಟ್ಟು 6 ಇನಿಂಗ್ಸ್ ಆಡಿರುವ ಜೋ ರೂಟ್ 2 ಭರ್ಜರಿ ಶತಕ ಹಾಗೂ 1 ಅರ್ಧಶತಕದೊಂದಿಗೆ ಒಟ್ಟು 375 ರನ್ ಗಳಿಸಿದ್ದಾರೆ. ತಮ್ಮ ಈ ಶ್ರೇಷ್ಠ ಪ್ರದರ್ಶದಿಂದಾಗಿಯೇ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಜೋ ರೂಟ್ ಅವರು ತಮ್ಮದಾಗಿಸಿಕೊಂಡಿದ್ದಾರೆ. ಈ ಪ್ರಶಸ್ತಿಯೊಂದಿಗೆ ಟೆಸ್ಟ್ನಲ್ಲಿ ಇಂಗ್ಲೆಂಡ್ ಪರ ಅತ್ಯಧಿಕ ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಇದೀಗ 48 ಟೆಸ್ಟ್ ಸರಣಿಗಳ ಮೂಲಕ ಜೋ ರೂಟ್ 6ನೇ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಜೋ ರೂಟ್ ಅವರು ಇಂಗ್ಲೆಂಡ್ನ ಆ್ಯಂಡ್ರ್ಯೂ, ಅಲೆಸ್ಟಕ್ ಕುಕ್, ಗ್ರಹಾಂ ಗೂಚ್ ಹಾಗೂ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಕೂಡ ಹಿಂದಿಕ್ಕಿದ್ದಾರೆ.