ನವದೆಹಲಿ, ಸೆ.12 (DaijiworldNews/ AK): ಪ್ಯಾರಿಸ್ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತ ಇತಿಹಾಸ ಸೃಷ್ಟಿಸಿದ ಬೆನ್ನಲ್ಲೇ ಭಾರತೀಯ ಕ್ರೀಡಾಪಟುಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ.
ಕ್ರೀಡಾಪಟುಗಳನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿ ದಾಖಲೆಯ 29 ಪದಕಗಳನ್ನು ಗೆದ್ದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಶ್ಲಾಘಿಸಿದರು.
ಜೂಡೋದಲ್ಲಿ ಪ್ಯಾರಾಲಿಂಪಿಕ್ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಕಪಿಲ್ ಪರ್ಮಾರ್ ಅವರು ಪ್ರಧಾನಿ ಮೋದಿಗೆ ಸ್ಮರಣಿಕೆಯನ್ನು ಉಡುಗೊರೆಯಾಗಿ ನೀಡಿದರು. ಬಳಿಕ ಪ್ರಧಾನಿ ಮೋದಿ ಕಪಿಲ್ಗೆ ಆಟೋಗ್ರಾಫ್ನ್ನು ನೀಡಿದರು.
ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಟ್ಯಾಂಡಿಂಗ್ ಎಸ್ಎಚ್ 1 ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಅವನಿ ಲೆಖರಾ, ಪ್ರಧಾನಿ ಮೋದಿಯವರಿಗೆ "ಧನ್ಯವಾದ ಸರ್, ನಿಮ್ಮ ಬೆಂಬಲಕ್ಕೆ ಧನ್ಯವಾದಗಳು" ಎಂದು ಬರೆದ ಟೀ ಶರ್ಟ್ ಅನ್ನು ಉಡುಗೊರೆಯಾಗಿ ನೀಡಿದರು.