ಮುಂಬೈ, ಸೆ.14 (DaijiworldNews/AK): ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಇದೇ ಸೆಪ್ಟೆಂಬರ್ 19 ರಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ದೃಷ್ಟಿಯಿಂದ ಎರಡೂ ತಂಡಗಳಿಗೆ ಈ ಸರಣಿಯು ಅತ್ಯಂತ ಮಹತ್ವದ್ದಾಗಿದೆ. ಸರಣಿ ಆರಂಭಕ್ಕೆ ಇನ್ನು ಒಂದು ವಾರ ಇರುವಾಗಲೇ ಟೀಂ ಇಂಡಿಯಾ ಇಂದಿನಿಂದ ಚೆನ್ನೈನಲ್ಲಿ ತನ್ನ ಅಭ್ಯಾಸ ಶಿಬಿರವನ್ನು ಆರಂಭಿಸಿದೆ.
ಗೌತಮ್ ಗಂಭೀರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಸರಣಿಯಾಗಿರುವುದರಿಂದ ಗಂಭೀರ್ ಅವರಿಗೂ ಈ ಸರಣಿ ಅತ್ಯಂತ ಮಹತ್ವದ್ದಾಗಿದೆ. ಹೀಗಾಗಿ ತಂಡದ ಎಲ್ಲಾ ಆಟಗಾರರೊಂದಿಗೆ ಸಮಯ ಕಳೆಯುವ ಮೂಲಕ ಗಂಭೀರ್, ಆಟಗಾರರ ಅಭ್ಯಾಸವನ್ನು ಗಮನಿಸಿದರು. ಇನ್ನು ಈ ಅಭ್ಯಾಸ ಶಿಬಿರಕ್ಕೆ ನಾಯಕ ರೋಹಿತ್ ಶರ್ಮಾ ಮಾತ್ರವಲ್ಲದೆ ವಿರಾಟ್ ಕೊಹ್ಲಿ ಕೂಡ ಲಂಡನ್ನಿಂದ ನಿಗದಿತ ಸಮಯಕ್ಕೆ ಚೆನ್ನೈಗೆ ಬಂದಿಳಿದಿದ್ದಾರೆ.
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್, ಕೆಎಲ್ ರಾಹುಲ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ರಿಷಬ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಮತ್ತು ಯಶ್ ದಯಾಳ್.
ಬಾಂಗ್ಲಾದೇಶ ಟೆಸ್ಟ್ ತಂಡ: ನಜ್ಮುಲ್ ಹಸನ್ ಶಾಂಟೊ (ನಾಯಕ), ಝಾಕಿರ್ ಹಸನ್, ಶದ್ಮನ್ ಇಸ್ಲಾಂ, ಮೊಮಿನುಲ್ ಹಕ್, ಮುಶ್ಫಿಕರ್ ರಹಮಾನ್, ಮಹಮ್ಮದುಲ್ ಹಸನ್ ಜಾಯ್, ಲಿಟನ್ ದಾಸ್ (ವಿಕೆಟ್ ಕೀಪರ್), ಜಾಕಿರ್ ಅಲಿ (ವಿಕೆಟ್ ಕೀಪರ್), ಶಕೀಬ್ ಅಲ್ ಹಸನ್, ಮೆಹಿದಿ ಹಸನ್ ಮಿರಾಜ್, ನಯೀಮ್ ಹಸನ್, ಹಸನ್ ಮಹಮೂದ್, ಸೈಯದ್ ಖಾಲಿದ್ ಅಹ್ಮದ್, ನಹಿದ್ ರಾಣಾ, ತೈಜುಲ್ ಇಸ್ಲಾಂ, ತಸ್ಕಿನ್ ಅಹ್ಮದ್.