ಹುಲುನ್ಬುಯರ್, ಸೆ.17(DaijiworldNews/AA): ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಫೈನಲ್ ಪಂದ್ಯದಲ್ಲಿ ಆತಿಥೇಯ ಚೀನಾವನ್ನು ಮಣಿಸಿ ಭಾರತ ಹಾಕಿ ತಂಡವು ದಾಖಲೆಯ 5ನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಕಿರೀಟವನ್ನು ತನ್ನದಾಗಿಸಿಕೊಂಡಿದೆ.
ಅಜೇಯವಾಗಿ ಫೈನಲ್ ಪ್ರವೇಶಿಸಿದ್ದ ಹರ್ಮನ್ ಪ್ರೀತ್ ಸಿಂಗ್ ನಾಯಕತ್ವದ ಭಾರತ ತಂಡಕ್ಕೆ ಚೀನಾ ಭಾರೀ ಪೈಪೋಟಿ ನೀಡಿತ್ತು. ಈ ಪಂದ್ಯದಲ್ಲಿ ಉಭಯ ತಂಡಗಳಿಂದ ಸಮಬಲದ ಹೋರಾಟ ಕಂಡುಬಂದಿದ್ದು, ಮೊದಲ ಮೂರು ಕ್ವಾರ್ಟರ್ ನಲ್ಲಿ ಉಭಯ ತಂಡಗಳಿಗೆ ಸೋಲು ಗಳಿಸಲು ಸಾಧ್ಯವಾಗಲಿಲ್ಲ. ಆದರೆ 4ನೇ ಕ್ವಾರ್ಟರ್ನಲ್ಲಿ ಗೋಲು ದಾಖಲಿಸುವಲ್ಲಿ ಯಶಸ್ವಿಯಾದ ಭಾರತವು ಮುನ್ನಡೆ ಸಾಧಿಸಿತು.
ಈ ಮುನ್ನಡೆಯನ್ನು ಕಾಯ್ದುಕೊಂಡ ಭಾರತ ತಂಡವು ಕೊನೆಗೆ ಜಯ ಸಾಧಿಸುವಲ್ಲಿ ಯಶಸ್ವಿಯಾಯಿತು. ಬಳಿಕ ಹಲವು ಬಾರಿ ಚೀನಾ ತಂಡದ ಆಟಗಾರರು ಪ್ರಯತ್ನ ಪಟ್ಟರೂ ಸಾಧ್ಯವಾಗಲಿಲ್ಲ.