ನವದೆಹಲಿ, ಸೆ.18 (DaijiworldNews/AK): ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಆತಿಥ್ಯವಹಿಸಲು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಸಜ್ಜಾಗಿದೆ. ಉಭಯ ತಂಡಗಳ ನಡುವಿನ ಮೊದಲ ಪಂದ್ಯ ನಾಳೆಯಿಂದ ಸೆಪ್ಟೆಂಬರ್ 19 ರಿಂದ ಆರಂಭವಾಗಲಿದೆ.
ಬಾಂಗ್ಲಾದೇಶ ವಿರುದ್ಧದ ಪಂದ್ಯದ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗೌತಮ್ ಗಂಭೀರ್ ತಂಡದ ಆಡುವ ಹನ್ನೊಂದರ ಬಳಗದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.11 ಆಟಗಾರರು ಆಡಲು ಸಾಧ್ಯವಾದ ಕಾರಣ ಯುವ ಆಟಗಾರರಾದ ಸರ್ಫರಾಜ್ ಖಾನ್ ಮತ್ತು ಧ್ರುವ್ ಜುರೆಲ್, ಅವಕಾಶಗಳಿಗಾಗಿ ಕಾಯಬೇಕಾಗಬಹುದು ಎಂದರು.
ಈ ಮೂಲಕ ಕೆಎಲ್ ರಾಹುಲ್ ಮತ್ತು ರಿಷಬ್ ಪಂತ್ ಪ್ಲೇಯಿಂಗ್-11 ರಲ್ಲಿ ಸ್ಥಾನ ಪಡೆಯುವುದು ಖಚಿತವಾಗಿದೆ. ವಾಸ್ತವವಾಗಿ ಭಾರತದ ಕಳೆದ ಟೆಸ್ಟ್ ಸರಣಿಯಲ್ಲಿ ವಿಕೆಟ್ ಕೀಪರ್ ರೂಪದಲ್ಲಿ ಧೃವ್ ಜುರೇಲ್ ಕಾಣಿಸಿಕೊಂಡಿದ್ದರು. ಆದರೆ ಇದೀಗ ರಿಷಬ್ ಪಂತ್ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿರುವ ಕಾರಣ ಅವರು ಆ ಸ್ಥಾನವನ್ನು ತುಂಬುವುದು ಖಚಿತವಾಗಿದೆ.
ಟಾಪ್ ಆರ್ಡರ್ ಬ್ಯಾಟಿಂಗ್ನಲ್ಲಿ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಓಪನರ್ ಆಗಲಿದ್ದಾರೆ. ಶುಭ್ಮನ್ ಗಿಲ್ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಬರಲಿದ್ದು, ವಿರಾಟ್ ಕೊಹ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಬರಲಿದ್ದಾರೆ. ಮೂವರು ಸ್ಪಿನ್ನರ್ಗಳು ಮತ್ತು ಇಬ್ಬರು ವೇಗದ ಬೌಲರ್ಗಳೊಂದಿಗೆ ತಂಡ ಕಣಕ್ಕಿಳಿಯುವುದು ಖಚಿತವಾಗಿದೆ.
ಸ್ಪಿನ್ ವಿಭಾಗದಲ್ಲಿ ಆರ್ ಅಶ್ವಿನ್, ರವೀಂದ್ರ ಜಡೇಜಾ ಮತ್ತು ಕುಲ್ದೀಪ್ ಯಾದವ್ ಕಾಣಿಸಿಕೊಂಡರೆ, ವೇಗದ ಬೌಲರ್ಗಳಾಗಿ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಮೊದಲ ಟೆಸ್ಟ್ಗೆ ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಆರ್.ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.