ಇಂಗ್ಲೆಂಡ್, ಮೇ 31 (Daijiworld News/SM): 12ನೇ ವಿಶ್ವಕಪ್ ನ ಎರಡನೇ ದಿನದ ಪಂದ್ಯದಲ್ಲಿ ಪಾಕಿಸ್ತಾನ ತಂಡದ ವಿರುದ್ಧ ವೆಸ್ಟ್ ಇಂಡೀಸ್ ಸುಲಭ ಜಯಗಳಿಸಿದೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ 21.4 ಓವರ್ ಗಳಲ್ಲಿ ತನ್ನೆಲ್ಲ ವಿಕೆಟ್ ಗಳನ್ನು ಕಳೆದುಕೊಂಡು 105 ರನ್ ಪೇರಿಸಿತು. ಅಲ್ಪ ಮೊತ್ತದ ಗುರಿ ಬೆನ್ನಟ್ಟಿದ ವಿಂಡೀಸ್ ಕೇವಲ 13.4 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 108 ರನ್ಗಳನ್ನು ಪೇರಿಸಿ ಗೆಲುವುನ ಸಂಭಮ ಆಚರಿಸಿತು. ಹಾಗೂ ಮೊದಲ ಪಂದ್ಯ ಗೆಲ್ಲುವ ಮೂಲಕ ಸಂಭ್ರಮಿಸಿತು.
ಇನ್ನು ಇದು ವಿಶ್ವಕಪ್ ಇತಿಹಾಸದಲ್ಲೇ ಪಾಕಿಸ್ತಾನ ದಾಖಲಿಸಿದ ಎರಡನೇ ಅತ್ಯಂತ ಕಡಿಮೆ ಮೊತ್ತವಾಗಿದೆ.
ಕ್ರಿಸ್ ಗೇಲ್ ವಿಶ್ವ ದಾಖಲೆ:
ಇನ್ನು ದಿ ಯೂನಿವರ್ಸ್ ಬಾಸ್' ಖ್ಯಾತಿಯ ವೆಸ್ಟ್ ಇಂಡೀಸ್ನ ದೈತ್ಯ ಬ್ಯಾಟ್ಸ್ಮನ್ ಕ್ರಿಸ್ ಗೇಲ್ ತಮ್ಮ ವೃತ್ತಿ ಜೀವನದ ಬಹುತೇಕ ಕೊನೆಯ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯನ್ನಾಡುತ್ತಿದ್ದು, ಆಡಿದ ಮೊದಲ ಪಂದ್ಯದಲ್ಲೇ ವಿಶ್ವ ದಾಖಲೆಯೊಂದನ್ನು ಬರೆದಿದ್ದಾರೆ. ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಪರ ಭರ್ಜರಿ ಬ್ಯಾಟಿಂಗ್ ನಡೆಸಿದ ಅನುಭವಿ ಬ್ಯಾಟ್ಸ್ಮನ್ ಕ್ರಿಸ್ ಗೇಲ್ 34 ಎಸೆತಗಳಲ್ಲಿ 50 ರನ್ಗಳನ್ನು ಸಿಡಿಸಿ ಅಬ್ಬರಿಸಿದರು. ಇದರಲ್ಲಿ 6 ಬೌಂಡರಿಗಳು ಮತ್ತು 3 ಸಿಕ್ಸರ್ಗಳು ಸೇರಿದ್ದವು.
ಈ ಪಂದ್ಯದಕ್ಕೂ ಮುನ್ನ ವಿಶ್ವಕಪ್ನಲ್ಲಿ ಆಡಿದ 26 ಪಂದ್ಯಗಳಿಂದ 37 ಸಿಕ್ಸರ್ಗಳನ್ನು ಸಿಡಿಸಿದ್ದ ಗೇಲ್, ಇದೀಗ ಒಟ್ಟು 40 ಸಿಕ್ಸರ್ಗಳೊಂದಿಗೆ ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್ಗಳನ್ನು ಸಿಡಿಸಿದ ಬ್ಯಾಟ್ಸ್ಮನ್ ಎಂಬ ದಾಖಲೆ ಬರೆದರು. ಇನ್ನು ಈ ಹಿಂದೆ ಎಬಿ ಡಿ'ವಿಲಿಯರ್ಸ್ ಕೂಡ 37 ಸಿಕ್ಸರ್ ಗಳನ್ನು ಸಿಡಿಸಿದ್ದರು.