ಮುಂಬೈ,ಅ.01(DaijiworldNews/AK): ಬಾಂಗ್ಲಾದೇಶ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಹೌದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ಸಾರ್ವಕಾಲಿಕ ದಾಖಲೆಯನ್ನು ಮುರಿಯುವ ಮೂಲಕ ದಾಖಲೆ ಬರೆದಿದ್ದಾರೆ.
ಕಾನ್ಪುರದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ 35 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 4 ಫೋರ್ ಗಳೊಂದಿಗೆ 47 ರನ್ ಬಾರಿಸಿದರು. ಈ 47 ರನ್ ಗಳೊಂದಿಗೆ ಕಿಂಗ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 27 ಸಾವಿರ ರನ್ ಪೂರೈಸಿದ್ದಾರೆ.
ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ 600 ಕ್ಕಿಂತ ಕಡಿಮೆ ಇನಿಂಗ್ಸ್ಗಳಲ್ಲಿ 27 ಸಾವಿರ ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಅತೀ ವೇಗವಾಗಿ 27000 ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.
ಇದಕ್ಕೂ ಮುನ್ನ ಈ ವರ್ಲ್ಡ್ ರೆಕಾರ್ಡ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಸಚಿನ್ 623 ಇನಿಂಗ್ಸ್ಗಳ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 27 ಸಾವಿರ ರನ್ ಪೂರೈಸಿದ್ದರು. ಇದೀಗ ಈ ವಿಶ್ವ ದಾಖಲೆಯನ್ನು ಕೊಹ್ಲಿ ಮುರಿದಿದ್ದಾರೆ.