ಬೆಂಗಳೂರು,ಅ.15(DaijiworldNews/TA):ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಅಲಭ್ಯರಾಗುವ ಸಾಧ್ಯತೆಯಿದೆ ಎಂದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ಏಕೆಂದರೆ ಶಮಿ ಇನ್ನೂ ಸಹ ಆರೋಗ್ಯದಲ್ಲಿ ಸಂಪೂರ್ಣ ಫಿಟ್ನೆಸ್ ಸಾಧಿಸಿಲ್ಲ. ಹೀಗಾಗಿ ಅವರ ಪುನರಾಗಮನ ಮತ್ತಷ್ಟು ವಿಳಂಬವಾಗಲಿದೆ ಎಂದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ನಡೆದ ಸುದ್ದಿಘೋಷ್ಠಿಯಲ್ಲಿ ಮಾತನಾಡಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಈ ಹೇಳಿಕೆ ನೀಡಿದ್ದು, ಮೊಹಮ್ಮದ್ ಶಮಿ ಅವರ ಫಿಟ್ನೆಸ್ ಕುರಿತಾದ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಈ ಮಾಹಿತಿಯೊಂದಿಗೆ ಅವರು ಮುಂಬರುವ ಸರಣಿಗೂ ಅಲಭ್ಯರಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
ಆಸ್ಟ್ರೇಲಿಯಾ ಸರಣಿಗೆ ಶಮಿ ಅವರನ್ನು ಕರೆಯುವುದು ಕಷ್ಟಸಾಧ್ಯ. ಏಕೆಂದರೆ ಅವರ ಮೊಣಕಾಲಿನಲ್ಲಿ ಊತ ಕಾಣಿಸಿಕೊಂಡಿದೆ. ಇದೇ ಈಗ ಅವರಿಗೆ ಹಿನ್ನಡೆಯನ್ನುಂಟು ಮಾಡಿದೆ ಎಂಬುವುದಾಗಿ ರೋಹಿತ್ ಶರ್ಮಾ ಹೇಳಿದ್ದಾರೆ.