ಬೆಂಗಳೂರು,ಅ.19(DaijiworldNews/TA):ಶನಿವಾರದಂದು ಸರ್ಫರಾಜ್ ಖಾನ್ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕವನ್ನು ಗಳಿಸಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸರ್ಫರಾಝ್ ಖಾನ್ ವಿಶೇಷ ದಾಖಲೆ ಬರೆದಿದ್ದಾರೆ.
ಮೊದಲ ಇನಿಂಗ್ಸ್ನಲ್ಲಿ ಸರ್ಫರಾಝ್ ಶೂನ್ಯಕ್ಕೆ ಔಟಾಗಿದ್ದರು. ಆದರೆ ದ್ವಿತೀಯ ಇನಿಂಗ್ಸ್ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿರುವ ಸರ್ಫರಾಝ್ ಖಾನ್ ಕೇವಲ 110 ಎಸೆತಗಳಲ್ಲಿ ಶತಕ ಪೂರೈಸಿ ವಿಶೇಷ ದಾಖಲೆ ಬರೆದಿದ್ದಾರೆ.
2014 ರಲ್ಲಿ ಆಕ್ಲೆಂಡ್ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಶಿಖರ್ ಧವನ್ ಮೊದಲ ಇನಿಂಗ್ಸ್ನಲ್ಲಿ ಸೊನ್ನೆಗೆ ಔಟಾಗಿದ್ದರು. ಆದರೆ ದ್ವಿತೀಯ ಇನಿಂಗ್ಸ್ನಲ್ಲಿ 115 ರನ್ ಬಾರಿಸಿ ಸಾಧಿಸಿದ್ದರು. ಈ ಮೂಲಕ ಕಿವೀಸ್ ವಿರುದ್ಧ ಶೂನ್ಯದೊಂದಿಗೆ ಶತಕ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದರು. ಇದೇ ಪಟ್ಟಿಗೆ ಇದೀಗ ಸರ್ಫರಾಝ್ ಸೇರಿದ್ಧಾರೆ.
ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಶೂನ್ಯದ ಜೊತೆಗೆ ಶತಕ ಬಾರಿಸಿದ ಟೀಮ್ ಇಂಡಿಯಾದ ಎರಡನೇ ಬ್ಯಾಟರ್ ಎಂಬ ವಿಶೇಷ ದಾಖಲೆ ಬರೆದಿದ್ದಾರೆ ಸರ್ಫರಾಝ್ ಖಾನ್.