ದುಬೈ, ಅ.21(DaijiworldNews/AK):ಇದೇ ಮೊದಲ ಬಾರಿಗೆ ಮಹಿಳಾ ಟಿ20 ವಿಶ್ವಕಪ್ ಚಾಂಪಿಯನ್ ಪಟ್ಟವನ್ನು ನ್ಯೂಜಿಲೆಂಡ್ ಮಹಿಳಾ ತಂಡ ಮುಡಿಗೇರಿಸಿಕೊಂಡಿದೆ. ಈ ಮೂಲಕ ನ್ಯೂಜಿಲೆಂಡ್ ಮಹಿಳಾ ತಂಡ ಕೋಟಿ ನಗದು ಬಹುಮಾನ ತನ್ನದಾಗಿಸಿಕೊಂಡಿದೆ. ಇನ್ನು 2ನೇ ಬಾರಿಗೆ ರನ್ನರ್ ಪ್ರಶಸ್ತಿ ತನ್ನದಾಗಿಸಿಕೊಂಡ ದಕ್ಷಿಣ ಆಫ್ರಿಕಾ ಮಹಿಳಾ ತಂಡ ಸಹ ನಗದು ಬಹುಮಾನ ಪಡೆದುಕೊಂಡಿದೆ.
ಭಾನುವಾರ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ಮಹಿಳಾ ತಂಡ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 32 ರನ್ಗಳ ಗೆಲುವು ಸಾಧಿಸಿದ ಕಿವೀಸ್ ಇದೇ ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು.
ಈ ಟ್ರೋಫಿಯೊಂದಿಗೆ 19.6 ಕೋಟಿ ರೂ. (2.34 ದಶಲಕ್ಷ ಡಾಲರ್) ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿತು. ಜೊತೆಗೆ ರನ್ನರ್ ಅಪ್ ಪ್ರಶಸ್ತಿ ಪಡೆದ ದಕ್ಷಿಣ ಆಫ್ರಿಕಾ ಮಹಿಳಾ ತಂಡ ಬರೋಬ್ಬರಿ 9.8 ಕೋಟಿ ರೂ. (1.17 ದಶಲಕ್ಷ ಡಾಲರ್) ಬಹುಮಾನ ಪಡೆದುಕೊಂಡಿದೆ.