ದೆಹಲಿ, ಅ.23(DaijiworldNews/AA): ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಕೆಎಲ್ ರಾಹುಲ್ ಅವರನ್ನು ತಂಡದಿಂದ ಕೈ ಬಿಡುವುದು ಬಹುತೇಕ ಖಚಿತವಾಗಿದೆ.
ಎಲ್ಎಸ್ಜಿ ಫ್ರಾಂಚೈಸಿಯ ಮೂಲಗಳ ಮಾಹಿತಿ ಪ್ರಕಾರ, ಲಕ್ನೋ ಸೂಪರ್ ಜೈಂಟ್ಸ್ ತಂಡದ ರಿಟೈನ್ ಲಿಸ್ಟ್ನಲ್ಲಿ ಕೆಎಲ್ ರಾಹುಲ್ ಅವರ ಹೆಸರಿಲ್ಲ. ಇದರೊಂದಿಗೆ ಅವರು ಮುಂಬರುವ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಖಚಿತ ಆದಂತಾಗಿದೆ.
ಈ ಹಿಂದೆ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಕೆಎಲ್ ರಾಹುಲ್ ಅವರನ್ನು ರಿಲೀಸ್ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡಿದ್ದವು. ಈ ಬಗ್ಗೆ ಎಲ್ಎಸ್ಜಿ ಮಾಲೀಕ ಸಂಜೀವ್ ಗೊಯೆಂಕಾ ಅವರು ಪ್ರತಿಕ್ರಿಯೆ ನೀಡಿದ್ದು, ರಾಹುಲ್ ನಮ್ಮ ಕುಟುಂಬದ ಅವಿಭಾಜ್ಯ ಅಂಗ ಎಂದು ತಿಳಿಸಿದ್ದರು. ಆದರೆ ಅವರು ರಾಹುಲ್ ಅವರನ್ನು ರಿಟೈನ್ ಮಾಡಿಕೊಳ್ಳುತ್ತೇವೆ ಎಂದು ಹೇಳಿಕೆ ನೀಡಲಿಲ್ಲ. ಈ ಮೂಲಕ ರಾಹುಲ್ ಅವರನ್ನು ಎಲ್ಎಸ್ಜಿ ಫ್ರಾಂಚೈಸಿ ಉಳಿಸಿಕೊಳ್ಳುವುದು ಅನುಮಾನ ಎನ್ನಲಾಗುತ್ತಿದೆ.