ಪುಣೆ,ಅ.24(DaijiworldNews/TA):ಭಾರತದ ಅನುಭವಿ ಸ್ಪಿನ್ನರ್ ರವಿ ಅಶ್ವಿನ್ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಇತಿಹಾಸದಲ್ಲಿ ಪ್ರಮುಖ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಭಾರತ-ನ್ಯೂಜಿಲೆಂಡ್ ನಡುವೆ ಪುಣೆಯಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ನ ಮೊದಲ ದಿನದಂದು ಅಶ್ವಿನ್ ಈ ಸಾಧನೆ ಮಾಡಿದರು. ಈ ತೆರನಾಗಿ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ 78 ಇನಿಂಗ್ಸ್ಗಳಲ್ಲಿ 1809.2 ಓವರ್ಗಳನ್ನು ಎಸೆದಿರುವ ಲಿಯಾನ್ ಒಟ್ಟು 187 ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ಪಟ್ಟಿಗೆ ಅಶ್ವಿನ್ ಸೇರಿಕೊಂಡಿದ್ದಾರೆ. ಲಿಯಾನ್ ಅವರನ್ನು ಹಿಂದಿಕ್ಕಿ ಅಶ್ವಿನ್ ಅಗ್ರಸ್ಥಾನಕ್ಕೇರಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಟೆಸ್ಟ್ ಸರಣಿಯಲ್ಲಿ ಒಟ್ಟು 74 ಇನಿಂಗ್ಸ್ ಆಡಿರುವ ಅಶ್ವಿನ್ 1390 ಓವರ್ಗಳಲ್ಲಿ ಎಸೆದಿದ್ದಾರೆ ಎನ್ನಲಾಗಿದೆ. ಈ ವೇಳೆ ಒಟ್ಟು 188 ವಿಕೆಟ್ಗಳನ್ನು ಪಡೆದು ಹೊಸ ಇತಿಹಾಸವನ್ನು ನಿರ್ಮಿಸಿದ್ದಾರೆ ಅಶ್ವಿನ್. ಈ ಮೂಲಕ ಅನಿಲ್ ಕುಂಬ್ಳೆ ಬಳಿಕ ಟೆಸ್ಟ್ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ ಅಶ್ವಿನ್.