ಆಮಸ್ಟರ್ಡ್ಯಾಂ, ನ.20(DaijiworldNews/AA): ಸ್ಪೇನ್ನ ಟೆನಿಸ್ ದಿಗ್ಗಜ ರಫೆಲ್ ನಡಾಲ್ ಅವರು ತಮ್ಮ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ.
ಕಿಂಗ್ ಆಫ್ ಕ್ಲೇ ಎಂದೇ ಪ್ರಸಿದ್ಧಿಯಾಗಿರುವ ರಫೆಲ್ ನಡಾಲ್ ನ.19 ರಂದು ನಡೆದ ನೆದರ್ಲ್ಯಾಂಡ್ ವಿರುದ್ಧದ ಡೇವಿಸ್ ಕಪ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸೋಲನ್ನು ಅನುಭವಿಸಿದರು. ಈ ಮೂಲಕ ತಮ್ಮ ವೃತ್ತಿ ಜೀವನಕ್ಕೆ ವಿದಾಯವನ್ನು ಘೋಷಿಸಿದರು.
ತಮ್ಮ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಿದ ನಂತರ ಸ್ಪ್ಯಾನಿಷ್ ರಾಷ್ಟ್ರಗೀತೆಯ ವೇಳೆಯಲ್ಲಿ ರಫೆಲ್ ಭಾವುಕರಾದರು. ಇನ್ನೂ 10,000 ಕ್ಕೂ ಹೆಚ್ಚು ಅಭಿಮಾನಿಗಳು 'ರಾಫಾ, ರಾಫಾ' ಎಂದು ಅವರ ಹೆಸರು ಕೂಗುತ್ತಾ ಹುರಿದುಂಬಿಸಿದರು.
ಈ ಬಗ್ಗೆ ಮಾತನಾಡಿದ ರಫೆಲ್ ಅವರು, ಇಂದು ನನ್ನ ಭಾವನಾತ್ಮಕ ದಿನ, ವೃತ್ತಿಪರನಾಗಿ ಇಂದು ನನ್ನ ಕೊನೆಯ ಪಂದ್ಯ. ಕೊನೆಯ ಬಾರಿ ಈ ರೀತಿಯಾಗಿ ರಾಷ್ಟ್ರಗೀತೆಯನ್ನು ಕೇಳುವುದು ಒಂದು ವಿಶೇಷ ಭಾವನೆ ಎಂದರು.