ವೆಸ್ಟ್ ಇಂಡೀಸ್, ಡಿ.20(DaijiworldNews/AA): ಪ್ರಸ್ತುತ ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಬಾಂಗ್ಲಾದೇಶ ತಂಡ ಟಿ20 ಸರಣಿಯಲ್ಲಿ ಕ್ಲೀನ್ ಸ್ವೀಪ್ ಮಾಡುವಲ್ಲಿ ಯಶಸ್ವಿಯಾಗಿದೆ.
ಉಭಯ ತಂಡಗಳ ನಡುವೆ ನಡೆದ ಕೊನೆಯ ಹಾಗೂ ಮೂರನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು 80 ರನ್ ಗಳಿಂದ ಬಾಂಗ್ಲಾ ತಂಡ ಸೋಲಿಸಿತು. ಮೂರನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ತಂಡ 190 ರನ್ ಕಲೆಹಾಕಿತು.
ಈ ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ ತಂಡ 109 ರನ್ಗಳಿಗೆ ಆಲೌಟ್ ಆಗುವ ಮೂಲಕ ಸೋಲನ್ನನುಭವಿಸಿತು. ಈ ಮೂಲಕ ಮೊದಲ ಬಾರಿಗೆ ವಿದೇಶದಲ್ಲಿ ನಡೆದ ಟಿ20 ಸರಣಿಯಲ್ಲಿ ಬಾಂಗ್ಲಾ ತಂಡ ಕ್ಲೀನ್ ಸ್ವೀಪ್ ಮಾಡಿದೆ.
ಮೂರನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ 20 ಓವರ್ಗಳಲ್ಲಿ 7 ವಿಕೆಟ್ಗೆ 189 ರನ್ ಗಳಿಸುವ ಮೂಲಕ ವೆಸ್ಟ್ ಇಂಡೀಸ್ ತಂಡವನ್ನ ಮಣಿಸಿತು.