ಮುಂಬೈ, ಡಿ.25(DaijiworldNews/AA): ಟೀಮ್ ಇಂಡಿಯಾದ ಮಾಜಿ ಆಟಗಾರ ನಮನ್ ಓಜಾ ತಂದೆ ವಿನಯ್ ಓಜಾ ಸೇರಿದಂತೆ ನಾಲ್ವರಿಗೆ ಮುಲ್ತಾಯಿ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ.
2013 ರಲ್ಲಿ ವಿನಯ್ ಓಜಾ ಸೇರಿದಂತೆ ನಾಲ್ವರು ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ 1.25 ಕೋಟಿ ರೂ. ವಂಚನೆ ಮಾಡಿದ್ದರು. ಈ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ 11 ವರ್ಷಗಳ ಬಳಿಕ ಟೀಂ ಇಂಡಿಯಾದ ಮಾಜಿ ಆಟಗಾರ ನಮನ್ ಓಜಾ ತಂದೆ ವಿನಯ್ ಓಜಾ ಸೇರಿದಂತೆ ನಾಲ್ವರಿಗೆ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯವು ತೀರ್ಪು ನೀಡಿದೆ.
ಈ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ತಪ್ಪಿತಸ್ಥರೆಂದು ಸಾಬೀತಾಗಿದೆ. ಈ ಹಿನ್ನೆಲೆ ವಿನಯ್ ಓಜಾ ಸೇರಿದಂತೆ ಮೂವರಿಗೆ 7 ವರ್ಷಗಳ ಜೈಲು ಶಿಕ್ಷೆ, 14 ಲಕ್ಷ ರೂ. ದಂಡ ಹಾಗೂ ಹಗರಣದ ಮಾಸ್ಟರ್ ಮೈಂಡ್ ಅಭಿಷೇಕ್ ರತ್ನಂಗೆ 10 ವರ್ಷ ಜೈಲು ಮತ್ತು 80 ಲಕ್ಷ ರೂ. ದಂಡ ವಿಧಿಸಲಾಗಿದೆ.
ಪ್ರಕರಣವು ಬೆಳಕಿಗೆ ಬರುತ್ತಿದ್ದಂತೆ ಅಭಿಷೇಕ್ ರತ್ನಂ ಸೇರಿದಂತೆ ಕೆಲವರನ್ನು ಬಂಧಿಸಲಾಗಿತ್ತು. ಹಾಗೆಯೇ ಈ ಪ್ರಕರಣದಲ್ಲಿ ಭಾಗಿಯಾಗಿದ್ದ ನಮನ್ ಓಜಾ ಅವರ ತಂದೆಯು 2022 ರಲ್ಲಿ ಬಂಧಿಸಲಾಗಿತ್ತು.