ಮುಂಬೈ, ಜ.05(DaijiworldNews/TA): ಭಾರತ ಕ್ರಿಕೆಟ್ ತಂಡದ ಲೆಜೆಂಡರಿ ಓಪನರ್ ವೀರೇಂದ್ರ ಸೆಹ್ವಾಗ್ ಅವರ ಹಿರಿಯ ಪುತ್ರ ಆರ್ಯವೀರ್ ದೆಹಲಿ ಅಂಡರ್-19 ತಂಡದ ಪರ ಕಣಕ್ಕಿಳಿಯುತ್ತಿದ್ದಾರೆ. ಮತ್ತೊಂದೆಡೆ ಕಿರಿಯ ಮಗ ವೇದಾಂತ್ ಸೆಹ್ವಾಗ್ ಕ್ರಿಕೆಟ್ ಅಂಗಳದಲ್ಲಿ ಸಂಚಲನ ಆರಂಭಿಸಿದ್ದಾರೆ. ವಿಶೇಷವೆಂದರೆ ವೇದಾಂತ್ ಬೌಲರ್ ಆಗಿ ಮಿಂಚುವ ಪ್ರಯತ್ನದಲ್ಲಿದ್ದಾರೆ.
ಪ್ರಸ್ತುತ ನಡೆಯುತ್ತಿರುವ ವಿಜಯ್ ಮರ್ಚೆಂಟ್ ಟ್ರೋಫಿ ಟೂರ್ನಿಯಾದ 16 ವರ್ಷದೊಳಗಿನವರ ಈ ಟೂರ್ನಿಯಲ್ಲಿ ಆಫ್ ಸ್ಪಿನ್ನರ್ ಬೌಲರ್ ಆಗಿ ಕಾಣಿಸಿಕೊಂಡಿರುವ ವೇದಾಂತ್ ದೆಹಲಿ ಪರ ಅದ್ಭುತ ಬೌಲಿಂಗ್ ಪ್ರದರ್ಶಿಸಿದ್ದಾರೆ. ಟೂರ್ನಿಯಲ್ಲಿ 5 ಪಂದ್ಯಗಳನ್ನಾಡಿರುವ 14 ವರ್ಷದ ವೇದಾಂತ್ ಈಗಾಗಲೇ ಒಟ್ಟು 24 ವಿಕೆಟ್ ಕಬಳಿಸಿದ್ದಾರೆ.
ವೀರೇಂದ್ರ ಸೆಹ್ವಾಗ್ ಕೂಡ ತಮ್ಮ ಮಗನ ಬೌಲಿಂಗ್ ಅನ್ನು ಶ್ಲಾಘಿಸಿ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದನ್ನು ಹಂಚಿಕೊಂಡು ಸಂತಸ ವ್ಯಕ್ತ ಪಡಿಸಿದ್ದಾರೆ.