ಮುಂಬೈ, ಜ.09 (DaijiworldNews/AK):ಟೀಂ ಇಂಡಿಯಾ ಕ್ರಿಕೆಟಿಗ ಯುಜುವೇಂದ್ರ ಚಹಾಲ್ ದಂಪತಿ ವಿಚ್ಛೇದನ ಪಡೆಯಲ್ಲಿದ್ದಾರೆ ಎಂಬ ಸುದ್ದಿಯ ನಡುವೆ ಇದೀಗ ಮತ್ತೊಂದು ಸ್ಟಾರ್ ಜೋಡಿಯ ವೈಯಕ್ತಿಕ ಬದುಕಿನಲ್ಲಿ ಬಿರುಕು ಮೂಡಿದೆ ಎನ್ನಲಾಗುತ್ತಿದೆ.
ಮನೀಶ್ ಪಾಂಡೆ ಹಾಗೂ ಅವರ ಮಡದಿ ಆಶ್ರಿತಾ ಶೆಟ್ಟಿ ನಡುವೆ ವೈಮನಸ್ಸು ಮೂಡಿದ್ದು, ಈ ಇಬ್ಬರು ಕೂಡ ವಿಚ್ಛೇದನ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.ಈ ಸ್ಟಾರ್ ಜೋಡಿ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪರಸ್ಪರ ಅನ್ಫಾಲೋ ಮಾಡಿದ್ದಾರೆ. ಇದರ ಜೊತೆಗೆ ಇಬ್ಬರ ಖಾತೆಯಿಂದಲೂ ಇಬ್ಬರು ಜೊತೆಗಿರುವ ಫೋಟೋಗಳನ್ನು ಡಿಲೀಟ್ ಮಾಡಲಾಗಿದೆ. ಹೀಗಾಗಿ ಈ ಇಬ್ಬರ ಸಂಬಂಧದಲ್ಲಿ ಬಿರುಕು ಮೂಡಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಇಬ್ಬರು ಕೂಡ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
ಕನ್ನಡಿಗ ಮನೀಶ್ ಪಾಂಡೆ ಹಾಗೂ ಆಶ್ರಿತಾ ಶೆಟ್ಟಿ 2019 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಕರ್ನಾಟಕದವರೇ ಆದ ಆಶ್ರಿತಾ ತಮಿಳು ಚಿತ್ರಗಳಲ್ಲೂ ಕೆಲಸ ಮಾಡಿದ್ದಾರೆ.