ಮುಂಬೈ, ಜ.14 (DaijiworldNews/AK):ನ್ಯೂಝಿಲೆಂಡ್ , ಆಸ್ಟ್ರೇಲಿಯಾ ವಿರುದ್ಧದ ಸೋಲಿನ ಬಳಿಕ ಬಿಸಿಸಿಐ ಎಚ್ಚೆತ್ತುಕೊಂಡಿದೆ. ಈ ಬಗ್ಗೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಕೋಚ್ ಗೌತಮ್ ಗಂಭೀರ್ ಅವರೊಂದಿಗೆ ಬಿಸಿಸಿಐ ಪರಿಶೀಲನಾ ಸಭೆ ನಡೆಸಿದೆ.
ಈ ಸಭೆಯಲ್ಲಿ ಆಟಗಾರರ ವೇತನ ಕಡಿತದ ಬಗ್ಗೆಯೂ ಚರ್ಚಿಸಲಾಗಿದೆ ಎಂದು ವರದಿಯಾಗಿದೆ.ಇಂಡಿಯಾ ಆಟಗಾರರಿಗೆ ಅವರ ಪ್ರದರ್ಶನಕ್ಕೆ ಅನುಗುಣವಾಗಿ ಸಂಭಾವನೆ ನೀಡುವ ಬಗ್ಗೆ ಬಿಸಿಸಿಐ ಅಧಿಕಾರಿಗಳು ಚರ್ಚಿಸಿದ್ದಾರೆ.ಚೆನ್ನಾಗಿ ಆಡಿದರೆ ಮಾತ್ರ ಉತ್ತಮ ಸಂಭಾವನೆ ಪಡೆಯಲಿದ್ದಾರೆ. ಇಲ್ಲದಿದ್ದರೆ ವೇತನ ಕಡಿತವಾಗಲಿದೆ.
ಆಟಗಾರರನ್ನು ಜವಾಬ್ದಾರಿಯುತ ಸ್ಥಾನದಲ್ಲಿರಿಸಲು ಇಂತಹ ಕಠಿಣ ಕ್ರಮಗಳನ್ನು ಕೈಗೊಳ್ಳಲು ಬಿಸಿಸಿಐ ಚರ್ಚೆ ನಡೆಸಿದ್ದು, ಈ ಮೂಲಕ ವಿಶ್ವ ಕ್ರಿಕೆಟ್ನಲ್ಲಿ ಭಾರತ ತಂಡದ ಪ್ರಾಬಲ್ಯವನ್ನು ಕಾಪಾಡಿಕೊಳ್ಳಲು ಚಿಂತಿಸಲಾಗಿದೆ.