ಸೌತ್ ಆಫ್ರಿಕಾ, ಫೆ.02 (DaijiworldNews/AA): ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ ಟಿ20 ಲೀಗ್ನಲ್ಲಿ ಹಾಫ್ ಸೆಂಚುರಿ ಬಾರಿಸುವ ಮೂಲಕ ಟೀಂ ಇಂಡಿಯಾ ಆಟಗಾರ ದಿನೇಶ್ ಕಾರ್ತಿಕ್ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯ ಹೆಸರಿನಲ್ಲಿದ್ದ ಸಾರ್ವಕಾಲಿಕ ದಾಖಲೆಯನ್ನು ಮುರಿದಿದ್ದಾರೆ.

ಸೌತ್ ಆಫ್ರಿಕಾ ಟಿ20 ಲೀಗ್ ಆಡಿದ ಮೊದಲ ಭಾರತೀಯ ಆಟಗಾರನೆಂದರೆ ಅದು ದಿನೇಶ್ ಕಾರ್ತಿಕ್. ಇದೀಗ ಜೋಬರ್ಗ್ ಸೂಪರ್ ಕಿಂಗ್ಸ್ ವಿರುದ್ಧ ಹಾಫ್ ಸೆಂಚುರಿ ಸಿಡಿಸುವ ಮೂಲಕ, ಸೌತ್ ಆಫ್ರಿಕಾ ಟಿ20 ಲೀಗ್ನಲ್ಲಿ ಹಾಫ್ ಸೆಂಚುರಿ ಸಿಡಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ಖ್ಯಾತಿ ಗಳಿಸಿದ್ದಾರೆ.
ಇದಕ್ಕೂ ಮುನ್ನ ಈ ದಾಖಲೆ ಧೋನಿ ಹೆಸರಿನಲ್ಲಿತ್ತು. ಟಿ20 ಕ್ರಿಕೆಟ್ನಲ್ಲಿ ಇದುವರೆಗೆ 342 ಇನಿಂಗ್ಸ್ ಆಡಿರುವ ಧೋನಿ 28 ಅರ್ಧಶತಕಗಳೊಂದಿಗೆ 7432 ರನ್ ಬಾರಿಸಿ ಈ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನ ದಿನೇಶ್ ಕಾರ್ತಿಕ್ ಮುರಿದಿದ್ದಾರೆ.
ದಿನೇಶ್ ಕಾರ್ತಿಕ್ ಈವರೆಗೆ 362 ಟಿ20 ಇನಿಂಗ್ಸ್ ಆಡಿದ್ದು, ಈ ವೇಳೆ 35 ಅರ್ಧಶತಕ ಸಿಡಿಸಿ ಒಟ್ಟು 7504 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ರನ್ ಗಳಿಸಿದ ಭಾರತದ ವಿಕೆಟ್ ಕೀಪರ್ ಬ್ಯಾಟರ್ ಎಂದೆನಿಸಿಕೊಂಡಿದ್ದಾರೆ.