ಮುಂಬೈ, ಫೆ.10 (DaijiworldNews/AA): ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ಇನ್ನು ಕೆಲ ದಿನಗಳು ಮಾತ್ರ ಉಳಿದಿದ್ದು, ಈ ಟೂರ್ನಿಯ ಬೆನ್ನಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಆರಂಭವಾಗಲಿದೆ. ಈ ಚಾಂಪಿಯನ್ಸ್ ಟ್ರೋಫಿಗೆ ಇಬ್ಬರು ಪ್ರಮುಖ ಆಟಗಾರರು ಅಲಭ್ಯರಾಗಿದ್ದಾರೆ. ಇವರಿಬ್ಬರು ಐಪಿಎಲ್ನಲ್ಲಿ ಆರ್ಸಿಬಿ ತಂಡದ ಪರ ಕಣಕ್ಕಿಳಿಯಬೇಕಾದ ಆಟಗಾರರಾಗಿದ್ದಾರೆ.

ಆರ್ಸಿಬಿ ತಂಡದಲ್ಲಿರುವ ಆಸ್ಟ್ರೇಲಿಯಾ ತಂಡದ ವೇಗಿ ಜೋಶ್ ಹ್ಯಾಝಲ್ವುಡ್ ಹಾಗೂ ಇಂಗ್ಲೆಂಡ್ ತಂಡದ ಯುವ ಆಲ್ರೌಂಡರ್ ಜೇಕಬ್ ಬೆಥೆಲ್ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾಗಿದ್ದಾರೆ.
ಜೋಶ್ ಹ್ಯಾಝಲ್ವುಡ್ ಅವರು ಮೊಣಕಾಲಿನ ಹಿ೦ಭಾಗದ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಅವರು ಫಿಟ್ನೆಸ್ ಸಮಸ್ಯೆಯ ಕಾರಣ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದಿದ್ದಾರೆ. ಇನ್ನು ಜೇಕಬ್ ಬೆಥೆಲ್ ಮಂಡಿರಜ್ಜು ಗಾಯದ ಸಮಸ್ಯೆಯ ಕಾರಣ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದಿದ್ದಾರೆ.
ಸದ್ಯ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದಿರುವ ಈ ಇಬ್ಬರು ಆಟಗಾರರು, ಈ ಬಾರಿಯ ಐಪಿಎಲ್ ನಲ್ಲಿ ಆರ್ಸಿಬಿ ಪರ ಕಣಕ್ಕಿಳಿಯುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಈ ಇಬ್ಬರು ಆಟಗಾರರು ಸಂಪೂರ್ಣ ಫಿಟ್ನೆಸ್ ಸಾಧಿಸದ ಹೊರತ ಐಪಿಎಲ್ ಆಡಲು ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್ ಮತ್ತು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಅನುಮತಿ ನೀಡುವುದಿಲ್ಲ. ಹೀಗಾಗಿ ಹ್ಯಾಝಲ್ವುಡ್ ಹಾಗೂ ಬೆಥೆಲ್ ಐಪಿಎಲ್ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.