ಕರಾಚಿ, , ಫೆ.19 (DaijiworldNews/AK):ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ ಟ್ರೋಫಿ ಟೂರ್ನಿಯ 9ನೇ ಆವೃತ್ತಿಗೆ ಇಂದು ಚಾಲನೆ ದೊರೆಯಲಿದೆ.

ಚಾಂಪಿಯನ್ ಟ್ರೋಫಿ ಟೂರ್ನಿಯನ್ನು ಸುಮಾರು ಎಂಟು ವರ್ಷಗಳ ನಂತರ ನಡೆಸಲಾಗುತ್ತಿದೆ. ಐಸಿಸಿ ಈ ಪಂದ್ಯಾವಳಿಯನ್ನು 1998 ರಲ್ಲಿ ಪ್ರಾರಂಭಿಸಿತು. ಚಾಂಪಿಯನ್ಸ್ ಟ್ರೋಫಿಯನ್ನು ಕೊನೆಯ ಬಾರಿಗೆ 2017 ರಲ್ಲಿ ಆಡಲಾಗಿತ್ತು. ಆಗ ಪಾಕಿಸ್ತಾನ ಪ್ರಶಸ್ತಿ ಗೆದ್ದಿತ್ತು. ಈ ಬಾರಿ ಪಾಕಿಸ್ತಾನ ಚಾಂಪಿಯನ್ಸ್ ಟ್ರೋಫಿಯನ್ನು ಆಯೋಜಿಸುತ್ತಿದ್ದು, ಟೂರ್ನಿಯ ಮೊದಲ ಪಂದ್ಯ ಪಾಕಿಸ್ತಾನ ಮತ್ತು ನ್ಯೂಝಿಲೆಂಡ್ ನಡುವೆ ನಡೆಯಲಿದೆ.
2025 ರ ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾಗಲಿವೆ. ಈ ಪಂದ್ಯವು ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ, ಪಂದ್ಯ ಮಧ್ಯಾಹ್ನ 2:30 ಕ್ಕೆ ಆರಂಭವಾಗಲಿದೆ.