ಇಸ್ಲಮಾಬಾದ್, ಫೆ.25 (DaijiworldNews/AA): ಭಾರತ ಮತ್ತು ಪಾಕಿಸ್ತಾನ ನಡುವಿನ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕ್ ವಿರುದ್ಧ ಟೀಂ ಇಂಡಿಯಾ 6 ವಿಕೆಟ್ಗಳ ಭರ್ಜರಿ ವಿಜಯ ಸಾಧಿಸಿ ಸೆಮಿಫೈನಲ್ಗೆ ಲಗ್ಗೆಯಿಟ್ಟಿದೆ.

ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಪಾಕ್ ಹಾಗೂ ಟೀಂ ಇಂಡಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಪಾಕಿಸ್ತಾನ 241 ರನ್ಗಳನ್ನು ಮಾತ್ರ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 42.3 ಓವರ್ಗಳಲ್ಲಿ 244ಗಳಿಸಿ ವಿಜಯ ಸಾಧಿಸಿತ್ತು.
ಭಾರತದ ಈ ಗೆಲುವಿನ ಬೆನ್ನಲ್ಲೇ ಪಾಕಿಸ್ತಾನದ ಮಾಧ್ಯಮವೊಂದರಲ್ಲಿ ನಡೆದ ಚರ್ಚೆಯೊಂದು ಇದೀಗ ಸಖತ್ ವೈರಲ್ ಆಗುತ್ತಿದೆ. ಈ ಚರ್ಚೆಯಲ್ಲಿ ಕಾಣಿಸಿಕೊಂಡ ಪ್ಯಾನೆಲ್ಗಳು ಕೆಲ ಆಘಾತಕಾರಿ ಆರೋಪಗಳನ್ನ ಮಾಡಿದ್ದಾರೆ. ಅದರಲ್ಲಿ ಒಬ್ಬರು ಭಾರತವು ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ 22 ಹಿಂದೂ ಪುರೋಹಿತರನ್ನು ಮಾಟಮಂತ್ರ ಮಾಡಲು ಕಳುಹಿಸಿದೆ. ಇದರಿಂದ ಪಾಕಿಸ್ತಾನ್ ಆಟಗಾರರ ಗಮನವನ್ನು ಬೇರೆಡೆಗೆ ಸೆಳೆಯಿತು ಎಂದು ಹೇಳಿಕೆ ನೀಡಿದ್ದಾರೆ.
ಮತ್ತೊಬ್ಬರು ಪ್ಯಾನೆಲಿಸ್ಟ್ ಭಾರತ ಪಾಕಿಸ್ತಾನದಲ್ಲಿ ಆಡಲು ನಿರಾಕರಿಸಲು ಇದೇ ಕಾರಣ ಎಂದು ಸೂಚಿಸಿದರು. ಏಕೆಂದರೆ ಪಂದ್ಯಕ್ಕೂ ಮುನ್ನ ಅವರಿಗೆ ಪೂಜೆ ಮಾಡಬೇಕಿತ್ತು. ಪಾಕಿಸ್ತಾನದಲ್ಲಿ ನಡೆದರೆ ಅದು ಸಾಧ್ಯವಿಲ್ಲ. ದುಬೈನಲ್ಲಿ ನಡೆದ ಪಂದ್ಯಕ್ಕೂ ಮುನ್ನ ದಿನ ಏಳು ಪುರೋಹಿತರು ಮೈದಾನದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದೀಗ ಪಾಕಿಸ್ತಾನ್ ಮಾಧ್ಯಮದ ವಿತಂಡವಾದ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಭಾರತ ತಂಡವು ಮಾಟಮಂತ್ರದಿಂದ ಗೆದ್ದಿದೆ ಎನ್ನುವ ಮೂಲಕ ನಗೆಪಾಟಲಿಗೀಡಾಗಿದೆ.