ಕ್ಯಾನ್ಬೆರಾ, ಮಾ.05 (DaijiworldNews/AA): ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪಂದ್ಯದ ಸೋಲಿನ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಏಕದಿನ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಹಂಗಾಮಿ ನಾಯಕರಾಗಿ ಕಾಣಿಸಿಕೊಂಡಿದ್ದ ಸ್ಮಿತ್ ಟೀಮ್ ಇಂಡಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ 71 ರನ್ ಗಳಿಸಿದ್ದರು. ಆದಾಗ್ಯೂ ಟೀ ಇಂಡಿಯಾ ವಿರುದ್ಧ ಗೆಲುವು ಸಾಧಿಸಾಧಿಸುವಲ್ಲಿ ಆಸ್ಟ್ರೇಲಿಯ ವಿಫಲವಾಗಿತ್ತು. ಇದೀಗ ಈ ಸೋಲಿನ ಬೆನ್ನಲ್ಲೇ ಸ್ಟೀವ್ ಸ್ಮಿತ್ ಏಕದಿನ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೂ ಮುನ್ನ ಸ್ಮಿತ್ ಕೇವಲ ಬ್ಯಾಟರ್ ಆಗಿ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಗಳಿಸಿದ್ದರು. ಆದರೆ ಕ್ಯಾಪ್ಟನ್ ಪ್ಯಾಟ್ ಕಮಿನ್ಸ್ ಗಾಯದ ಕಾರಣ ಟೂರ್ನಿಗೆ ಅಲಭ್ಯರಾದ ಹಿನ್ನಲೆ ಸ್ಮಿತ್ ಅವರಿಗೆ ನಾಯಕತ್ವ ವಹಿಸಲಾಗಿತ್ತು. ಸೆಮಿಫೈನಲ್ವರೆಗೆ ತಂಡವನ್ನ ಯಶಸ್ವಿಯಾಗಿ ಮುನ್ನಡೆಸಿದ ಅವರು ಇದೀಗ ಏಕದಿನ ಕ್ರಿಕೆಟ್ಗೆ ದಿಢೀರ್ ವಿದಾಯ ಹೇಳಿದ್ದಾರೆ.
ಇನ್ನು ಸ್ಮಿತ್ ಅವರು ಟಿ20 ಮತ್ತು ಟೆಸ್ಟ್ ತಂಡಗಳಲ್ಲಿ ಮುಂದುವರೆಯುವುದಾಗಿ ಹೇಳಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಸ್ಮಿತ್ ಆಸ್ಟ್ರೇಲಿಯಾ ಟೆಸ್ಟ್ ತಂಡದಲ್ಲಿ ಮಾತ್ರ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.