ಚೆನ್ನೈ, ಮಾ.28(DaijiworldNews/AK) : ಇಂದು ಇಂಡಿಯನ್ ಪ್ರೀಮಿಯರ್ ಲೀಗ್ನ ರೋಚಕ ಕದನ ನಡೆಯಲಿದೆ. ಹೌದು ಚೆನ್ನೈನ ಎಂ.ಎ.ಚಿದಂಬರಂ ಮೈದಾನ ಇಂದು ಆರ್ಸಿಬಿ vs ಚೆನ್ನೈ ನಡುವಿನ ಹೈವೋಲ್ಟೇಜ್ ಪಂದ್ಯವಾಗಿದೆ.

ಆರ್ಸಿಬಿ ಹಾಗೂ ಸಿಎಸ್ಕೆ ನಡುವಿನ ಕಾದಾಟ ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಈ ಬಾರಿ ಎರಡೂ ತಂಡಗಳು ಆಡಿರುವ ಮೊದಲ ಪಂದ್ಯವನ್ನು ಗೆದ್ದಿವೆ. ಆದರೆ ಚೆನ್ನೈನಲ್ಲಿ ಆರ್ಸಿಬಿ ಗೆದ್ದಿರುವುದು 2008ರಲ್ಲಿ ಒಮ್ಮೆ ಮಾತ್ರ. ಉಳಿದ 8 ಪಂದ್ಯಗಳಲ್ಲಿ ಸೋತಿದೆ.
ಈ ಬಾರಿ ಆರ್ಸಿಬಿ ತಂಡ ಹೆಚ್ಚು ಬಲಿಷ್ಠವಾಗಿದೆ. ಕೊಹ್ಲಿ, ಸಾಲ್ಟ್, ರಜತ್ರಿಂದ ಆರ್ಸಿಬಿ ಬ್ಯಾಟಿಂಗ್ನಲ್ಲಿ ಉತ್ತಮ ಪ್ರದರ್ಶನ ನೀಡುವ ಸಾಧ್ಯತೆ ಇದೆ. ಇನ್ನು ಈ ತಂಡದಲ್ಲಿ ಆಲ್ರೌಂಡರ್ಗಳಾದ . ಲಿವಿಂಗ್ ಸ್ಟೋನ್, ಕೃಣಾಲ್ ಪಾಂಡ್ಯ ಎರಡೂ ಹೊಣೆ ನಿಭಾಯಿಸುತ್ತಿದ್ದಾರೆ. ಹೇಝಲ್ವುಡ್, ಭುವನೇಶ್ವರ್, ಯಶ್ ದಯಾಳ್ ವೇಗದ ಬೌಲಿಂಗ್ನಲ್ಲಿ ತಂಡಕ್ಕೆ ಬಲ ತುಂಬಲಿದ್ದಾರೆ.
ಇತ್ತ ಚೆನ್ನೈ ತಂಡದಲ್ಲಿ ಆರ್.ಅಶ್ವಿನ್, ಜಡೇಜಾರಂತಹ ಅತ್ಯುತ್ತಮ ಸ್ಪಿನ್ನರ್ಗಳಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಬಲವಾದ ಯಾವ ಆಟಗಾರರೂ ಇಲ್ಲ. ರಚಿನ್ ರವೀಂದ್ರ, ಋತು ರಾಜ್ರನ್ನು ಬಿಟ್ಟರೆ ಉತ್ತಮ ಎನ್ನಬಲ್ಲ ಬ್ಯಾಟರ್ಗಳಿಲ್ಲ. ಒಟ್ಟಾರೆ ಇಂದು ನಡೆಯುವ ಹೈವೋಲ್ಟೇಜ್ ಪಂದ್ಯದಲ್ಲಿ ಯಾರಿಗೆ ಗೆಲುವು ಒಳಿಯಲಿದೆ ಎನ್ನುವುದು ಕಾದು ನೋಡಬೇಕಿದೆ.