ಮುಂಜೈ, ಮೇ. 01 (DaijiworldNews/AA): ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸದ ಕಾರಣ ಅಯ್ಯರ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಈ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸದಿದ್ದರೆ ಆಯಾ ತಂಡಗಳ ನಾಯಕನಿಗೆ ಬಿಸಿಸಿಐ ತಲಾ 12 ಲಕ್ಷ ರೂ. ದಂಡ ವಿಧಿಸುತ್ತದೆ. ಹೀಗೆ ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರು ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸದ ಕಾರಣ ದಂಡ ವಿಧಿಸಲಾಗಿದೆ.
ಈ ಮೊದಲು ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್ಮನ್ ಗಿಲ್ಗೆ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ಗೆ, ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ, ರಾಜಸ್ಥಾನ್ ರಾಯಲ್ಸ್ ತಂಡವನ್ನು 3 ಪಂದ್ಯಗಳಲ್ಲಿ ಮುನ್ನಡೆಸಿದ್ದ ರಿಯಾನ್ ಪರಾಗ್ಗೆ, ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ಗೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ಗೆ ತಲಾ 12 ಲಕ್ಷ ದಂಡ ವಿಧಿಲಾಗಿದೆ. ಜೊತೆಗೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.