ನವದೆಹಲಿ, ಮೇ.02(DaijiworldNews/ AK): ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಸರ್ಕಾರವು, ಪಾಕಿಸ್ತಾನದ ವಿರುದ್ಧ ಉಗ್ರ ಕ್ರಮಕ್ಕೆ ಮುಂದಾಗಿದೆ. ಇದೀಗ ಪಾಕಿಸ್ತಾನದ ಪ್ರಮುಖ ವ್ಯಕ್ತಿಗಳ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡದ ಸ್ಟಾರ್ ಆಟಗಾರರ ಸೋಶಿಯಲ್ ಮೀಡಿಯಾ ಖಾತೆಯನ್ನು ಭಾರತದಲ್ಲಿ ಬ್ಯಾನ್ ಮಾಡಲಾಗಿದೆ.

ಮೊದಲು ಪಾಕ್ ತಂಡದ ಸ್ಟಾರ್ ಆಟಗಾರರ ಯೂಟ್ಯೂಬ್ ಚಾನೆಲ್ಗಳನ್ನು ಭಾರತದಲ್ಲಿ ನಿಷೇಧಿಸಲಾಗಿತ್ತು. ಈಗ ತಂಡದ ಅನೇಕ ಪ್ರಸಿದ್ಧ ಆಟಗಾರರ ಇನ್ಸ್ಟಾಗ್ರಾಮ್ ಖಾತೆಗಳನ್ನು ಸಹ ಭಾರತದಲ್ಲಿ ಬ್ಯಾನ್ ಮಾಡಲಾಗಿದೆ.
ಈ ಬ್ಯಾನ್ ಶಿಕ್ಷೆಗೆ ಒಳಗಾದ ಆಟಗಾರರೆಂದರೆ, ಪಾಕಿಸ್ತಾನ ನಾಯಕ ಮೊಹಮ್ಮದ್ ರಿಜ್ವಾನ್, ಬಾಬರ್ ಆಝಂ ಮತ್ತು ಶಾಹೀನ್ ಅಫ್ರಿದಿ ಅವರ ಇನ್ಸ್ಟಾಗ್ರಾಮ್ ಖಾತೆಗಳನ್ನು ಭಾರತದಲ್ಲಿ ನಿಷೇಧಿಸಲಾಗಿದೆ.
ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪ್ರವಾಸಿಗರ ಮೇಲೆ ಗುಂಡು ಹಾರಿಸಲಾಗಿತ್ತು. ಈ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದರು. ಈ ಭಯೋತ್ಪಾದಕ ದಾಳಿಯನ್ನು ಪಾಕಿಸ್ತಾನದಲ್ಲಿ ನೆಲೆ ಹೊಂದಿರುವ ಲಷ್ಕರ್-ಎ-ತೊಯ್ಬಾದ ಸಹಾಯದಿಂದ ನಡೆಸಲಾಗಿದೆ ಎಂಬುದು ತನಿಖೆಯಿಂದ ಹೊರಬಂದಿದೆ.