ಮುಂಬೈ, ಮೇ. 06 (DaijiworldNews/AA): ಟಿ20 ಕ್ರಿಕೆಟ್ನಲ್ಲಿ ಆಸ್ಟ್ರೇಲಿಯಾದ ಆಲ್ರೌಂಡರ್ ಪ್ಯಾಟ್ ಕಮಿನ್ಸ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಪವರ್ಪ್ಲೇನಲ್ಲಿ ಎಸೆದ ತನ್ನೆಲ್ಲಾ ಓವರ್ಗಳ ಮೊದಲ ಎಸೆತದಲ್ಲೇ ಪ್ಯಾಟ್ ಕಮಿನ್ಸ್ ವಿಕೆಟ್ ಕಬಳಿಸಿದ್ದಾರೆ.

ಹೈದರಾಬಾದ್ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 55ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು, ಎಸ್ಆರ್ಹೆಚ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬೌಲಿಂಗ್ ಮಾಡಿದ ಎಸ್ಆರ್ಹೆಚ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮೊದಲ ಓವರ್ನ ಮೊದಲ ಎಸೆತದಲ್ಲೇ ಕರುಣ್ ನಾಯರ್ ವಿಕೆಟ್ ಕಬಳಿಸಿದ್ದರು.
ಆ ಬಳಿಕ 3ನೇ ಓವರ್ನಲ್ಲಿ ಮರಳಿದ ಅವರು ಮೊದಲ ಎಸೆತದಲ್ಲೇ ಫಾಫ್ ಡುಪ್ಲೆಸಿಸ್ ವಿಕೆಟ್ ಪಡೆದರು. ಆ ಬಳಿಕ 5ನೇ ಓವರ್ನ ಮೊದಲ ಎಸೆತದಲ್ಲಿ ಅಭಿಷೇಕ್ ಪೊರೆಲ್ ವಿಕೆಟ್ ಕಬಳಿಸಿದರು. ಈ ಮೂಲಕ ಪವರ್ಪ್ಲೇನಲ್ಲಿ ಎಸೆದ ಮೂರು ಓವರ್ಗಳ ಮೊದಲ ಎಸೆತದಲ್ಲೇ ವಿಕೆಟ್ ಕಬಳಿಸಿ ವಿಶ್ವ ದಾಖಲೆ ಬರೆದಿದ್ದಾರೆ.
ಜೊತೆಗೆ ಐಪಿಎಲ್ನ ಇತಿಹಾಸದಲ್ಲೂ ಪವರ್ಪ್ಲೇನಲ್ಲಿ ಮೂರು ವಿಕೆಟ್ ಕಬಳಿಸಿದ ಮೊದಲ ನಾಯಕ ಎಂಬ ದಾಖಲೆಯನ್ನು ಸಹ ಪ್ಯಾಟ್ ಕಮಿನ್ಸ್ ತನ್ನದಾಗಿಸಿಕೊಂಡಿದ್ದಾರೆ.