ಇಸ್ಲಾಮಾಬಾದ್, ಮೇ. 07 (DaijiworldNews/AA): ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬೆನ್ನಲ್ಲೇ ಪಾಕಿಸ್ತಾನ್ ಸೂಪರ್ ಲೀಗ್ನಿಂದ ವಿದೇಶಿ ಆಟಗಾರರು ಹಿಂದೆ ಸರಿಯುವ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.

ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಶುರು ಮಾಡಿದ ಬೆನ್ನಲ್ಲೇ ಪಿಎಸ್ಎಲ್ ಟೂರ್ನಿ ಆಡುತ್ತಿರುವ ವಿದೇಶಿ ಆಟಗಾರರು ಆತಂಕಕ್ಕೆ ಒಳಗಾಗಿದ್ದಾರೆ. ಈ ಹಿನ್ನಲೆ ವಿದೇಶಿ ಆಟಗಾರರು ಅರ್ಧದಲ್ಲೇ ಟೂರ್ನಿ ತೊರೆದು ತವರಿಗೆ ಹಿಂತಿರುಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಬಾರಿಯ ಐಪಿಎಲ್ನಲ್ಲಿ ಅವಕಾಶ ವಂಚಿತರಾದ ಬಹುತೇಕ ಆಟಗಾರರು ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ ಆಡುತ್ತಿದ್ದಾರೆ. ಇದೀಗ ಭಾರತ ಮತ್ತು ಪಾಕಿಸ್ತಾನ್ ನಡುವೆ ಯುದ್ಧ ನಡೆಯುವ ಸಾಧ್ಯತೆ ಇರುವುದರಿಂದ ವಿದೇಶಿ ಆಟಗಾರರು ಪಿಎಸ್ಎಲ್ ಟೂರ್ನಿಯಿಂದ ಹಿಂದೆ ಸರಿಯಲು ಮುಂದಾಗಿದ್ದಾರೆ. ಇದರಿಂದಾಗಿ ಪಾಕಿಸ್ತಾನ್ ಸೂಪರ್ ಲೀಗ್ ಸೀಸನ್-10 ಗೆ ಅರ್ಧದಲ್ಲೇ ಬ್ರೇಕ್ ಬೀಳುವ ಸಾಧ್ಯತೆ ಇದೆ.