ಮುಂಬೈ, ಮೇ. 10 (DaijiworldNews/TA): ಇಂಗ್ಲೆಂಡ್ ಟೆಸ್ಟ್ ಸರಣಿಗೂ ಮುನ್ನ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿ ಹೊಂದಲು ಬಯಸುವುದಾಗಿ ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಬಿಸಿಸಿಐಗೆ ತಿಳಿಸಿದ್ದಾರೆ ಆದರೆ ಉನ್ನತ ಅಧಿಕಾರಿಗಳು ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೇಳಿಕೊಂಡಿದ್ದಾರೆ ಎನ್ನಲಾಗಿದೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ತನ್ನನ್ನು ಆಯ್ಕೆ ಮಾಡಬೇಡಿ. ತಾನು ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತನಾಗಲು ನಿರ್ಧರಿಸಿದ್ದೇನೆ ಎಂದು ವಿರಾಟ್ ಕೊಹ್ಲಿ ಬಿಸಿಸಿಐ ಆಯ್ಕೆ ಸಮಿತಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಇದಾಗ್ಯೂ ವಿರಾಟ್ ಕೊಹ್ಲಿಯ ನಿವೃತ್ತಿಯನ್ನು ಬಿಸಿಸಿಐ ಅಂಗೀಕರಿಸಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಆಯ್ಕೆ ಸಮಿತಿ ಕೊಹ್ಲಿಯಲ್ಲಿ ಮನವಿ ಮಾಡಿದ್ದಾರೆ. ಹೀಗಾಗಿ ಇನ್ನೆರಡು ವಾರಗಳಲ್ಲಿ ಈ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ವಿರಾಟ್ ಕೊಹ್ಲಿ ನಿವೃತ್ತಿಯ ಅಂಚಿನಲ್ಲಿರುವುದಂತು ಸತ್ಯ. ಆದರೆ ಅದು ಸದ್ಯಕ್ಕೆ ಬೇಡ ಎಂಬುದು ಬಿಸಿಸಿಐನ ನಿರ್ಧಾರ.