ನವದೆಹಲಿ, ಜೂ. 18 (DaijiworldNews/TA): ಟಿ20 ಕ್ರಿಕೆಟ್ನಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಸ್ಫೋಟಕ ಸೆಂಚುರಿ ಸಿಡಿಸುವ ಮೂಲಕ ಹೊಸ ವಿಶ್ವ ದಾಖಲೆ ನಿರ್ಮಾಣ ಮಾಡಿದ್ದಾರೆ. ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ವಾಷಿಂಗ್ಟನ್ ಫ್ರೀಡಂ ಪರ ಕಣಕ್ಕಿಳಿಯುತ್ತಿರುವ ಮ್ಯಾಕ್ಸ್ವೆಲ್ ಲಾಸ್ ಏಂಜಲೀಸ್ ನೈಟ್ ರೈಡರ್ಸ್ ವಿರುದ್ಧ ಭರ್ಜರಿ ಶತಕ ಬಾರಿಸಿದ್ದಾರೆ.

ಮ್ಯಾಕ್ಸ್ವೆಲ್ ಕೇವಲ 48 ಎಸೆತಗಳಲ್ಲಿ ಎಸೆತಗಳಲ್ಲಿ ಶತಕ ಪೂರೈಸಿದ್ದರು. ಈ ಶತಕದ ವೇಳೆ ಅವರ ಬ್ಯಾಟ್ನಿಂದ ಮೂಡಿಬಂದ ಸಿಕ್ಸರ್ಗಳ ಸಂಖ್ಯೆ ಬರೋಬ್ಬರಿ 13. ಅಲ್ಲದೆ ಪ್ರಚಂಡ ಬ್ಯಾಟಿಂಗ್ನೊಂದಿಗೆ ಟಿ20 ಕ್ರಿಕೆಟ್ನಲ್ಲಿ 10500 ರನ್ ಪೂರೈಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ 10500+ ರನ್ ಕಲೆಹಾಕಿದ ವಿಶ್ವದ 16ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಗ್ಲೆನ್ ಮ್ಯಾಕ್ಸ್ವೆಲ್ ಟಿ20 ಕ್ರಿಕೆಟ್ನಲ್ಲಿ 10500+ ರನ್ಗಳೊಂದಿಗೆ 170 ವಿಕೆಟ್ಗಳನ್ನು ಸಹ ಕಬಳಿಸಿದ್ದಾರೆ.
ಟಿ20 ಕ್ರಿಕೆಟ್ನಲ್ಲಿ 8 ಶತಕ ಬಾರಿಸಿದ ವಿಶ್ವದ 6ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಗ್ಲೆನ್ ಮ್ಯಾಕ್ಸ್ವೆಲ್ ತಮ್ಮದಾಗಿಸಿಕೊಂಡಿದ್ದಾರೆ. ಮ್ಯಾಕ್ಸಿ ಅವರ ಈ ದಾಖಲೆಯ ಮುಂದಿರುವುದು ವಿರಾಟ್ ಕೊಹ್ಲಿ. ಕಿಂಗ್ಸ್ ಕೊಹ್ಲಿ 9 ಶತಕಗಳೊಂದಿಗೆ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.