ಮುಂಬೈ, ಜು. 28 (DaijiworldNews/AK): ಭಾರತ ಹಾಗೂ ಇಂಗ್ಲೆಂಡ್ ನಡುವಿನ 4ನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಇದೀಗ ಉಭಯ ತಂಡಗಳ ನಡುವಿನ ಸರಣಿಯ ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯ ಓವಲ್ನಲ್ಲಿನಡೆಯಲಿದ್ದು, ಈ ನಿರ್ಣಾಯಕ ಟೆಸ್ಟ್ ಪಂದ್ಯಕ್ಕೆ ಆತಿಥೇಯ ಇಂಗ್ಲೆಂಡ್ 15 ಸದಸ್ಯರ ತಂಡವನ್ನು ಪ್ರಕಟಿಸಿದೆ.

5ನೇ ಟೆಸ್ಟ್ಗೆ ಆಯ್ಕೆಯಾದ ತಂಡದ ವಿಶೇಷವೆಂದರೆ 3 ವರ್ಷಗಳ ಹಿಂದೆ ತಮ್ಮ ವೃತ್ತಿಜೀವನದ ಏಕೈಕ ಟೆಸ್ಟ್ ಪಂದ್ಯವನ್ನಾಡಿದ ಆಲ್ರೌಂಡರ್ ಜೇಮೀ ಓವರ್ಟನ್ ಅವರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಉಳಿದಂತೆ ಇಂಗ್ಲೆಂಡ್ ತನ್ನ ತಂಡದಲ್ಲಿ ಹೆಚ್ಚಿನ ಬದಲಾವಣೆಗಳನ್ನು ಮಾಡಿಲ್ಲ.
ಓವಲ್ನಲ್ಲಿ ನಡೆಯಲ್ಲಿರುವ ಐದನೇ ಟೆಸ್ಟ್ ಪಂದ್ಯದ ಉಭಯ ತಂಡಗಳಿಗೂ ನಿರ್ಣಾಯಕವಾಗಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ಗೆದ್ದರೆ ಸರಣಿ ಅದರ ಕೈವಶವಾಗಲಿದೆ. ಇತ್ತ ಟೀಂ ಇಂಡಿಯಾ ಈ ಪಂದ್ಯವನ್ನು ಗೆದ್ದರೆ, ಸರಣಿ 2-2 ರ ಸಮಬಲದೊಂದಿಗೆ ಅಂತ್ಯಗೊಳ್ಳಲಿದೆ. ಹೀಗಾಗಿ ಶತಾಯಗತಾಯ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡ ಉಭಯ ತಂಡಗಳಿಗಿದೆ.
5ನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ಜೋ ರೂಟ್, ಕ್ರಿಸ್ ವೋಕ್ಸ್, ಜ್ಯಾಕ್ ಕ್ರೌಲಿ, ಹ್ಯಾರಿ ಬ್ರೂಕ್, ಬೆನ್ ಡಕೆಟ್, ಬ್ರೈಡನ್ ಕಾರ್ಸೆ, ಗಸ್ ಅಟ್ಕಿನ್ಸನ್, ಜೇಮೀ ಓವರ್ಟನ್, ಓಲಿ ಪೋಪ್, ಲಿಯಾಮ್ ಡಾಸನ್, ಜೇಮೀ ಸ್ಮಿತ್, ಜಾಕೋಬ್ ಬೆಥೆಲ್, ಜೋಫ್ರಾ ಆರ್ಚರ್, ಜೋಶ್ ಟಂಗ್.