ಕಾರ್ಕಳ, ಆ. 16 (DaijiworldNews/AA): ಕ್ರೈಸ್ಟ್ಕಿಂಗ್ ಇಂಗ್ಲಿಷ್ ಮಾಧ್ಯಮ ಶಾಲೆಯ ಬಾಲಕಿಯರ ತಂಡ ಮತ್ತು ಬಾಲಕರ ತಂಡದ ಐದು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಫುಟ್ಬಾಲ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಮತ್ತು ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಜೇಸೀಸ್ ಸಂಸ್ಥೆ ಕಾರ್ಕಳ ಇವರ ಸಹಯೋಗದಲ್ಲಿ ನಿಟ್ಟೆಯ ಬಿ.ಸಿ. ಆಳ್ವ ಕ್ರೀಡಾಂಗಣದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಫುಟ್ಬಾಲ್ ಸ್ಪರ್ಧೆಗಳಲ್ಲಿ ಕ್ರೈಸ್ಟ್ಕಿಂಗ್ ಸಂಸ್ಥೆಯ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಒಟ್ಟು 16 ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಕ್ರೈಸ್ಟ್ಕಿಂಗ್ ಇಂಗ್ಲಿಷ್ ಮಾಧ್ಯಮ ಶಾಲೆಯ ಬಾಲಕಿಯರ ತಂಡವು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಬಾಲಕರ ತಂಡವು ದ್ವಿತೀಯ ಸ್ಥಾನ ಗಳಿಸಿ, ಆ ತಂಡದ ಐದು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.