ಇಸ್ಲಾಮಾಬಾದ್, ಆ. 17 (DaijiworldNews/AA): ಬಹುನಿರೀಕ್ಷಿತ 2025ರ ಟಿ20 ಏಷ್ಯಾ ಕಪ್ ಟೂರ್ನಿಗಾಗಿ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಪಾಕಿಸ್ತಾನ್ ತಂಡವನ್ನು ಪ್ರಕಟಿಸಿದೆ.

17 ಸದಸ್ಯರ ಈ ತಂಡದಲ್ಲಿ ಸ್ಟಾರ್ ಆಟಗಾರರಾದ ಬಾಬರ್ ಆಝಂ, ಮೊಹಮ್ಮದ್ ರಿಝ್ವಾನ್, ನಸೀಮ್ ಶಾ ಅವರನ್ನು ಏಷ್ಯಾಕಪ್ ತಂಡದಿAದ ಕೈ ಬಿಡಲಾಗಿದೆ. ಕಳೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿರುವ ಕಾರಣ ಬಾಬರ್ ಹಾಗೂ ರಿಝ್ವಾನ್ ಅವರನ್ನು ಏಷ್ಯಾಕಪ್ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ.
ಸಲ್ಮಾನ್ ಅಲಿ ಅಘಾ ಅವರಿಗೆ ತಂಡದ ನಾಯಕತ್ವವನ್ನು ನೀಡಲಾಗಿದೆ. ಆರಂಭಿಕನಾಗಿ ಫಖರ್ ಝಮಾನ್ ಹಾಗೂ ಸೈಮ್ ಅತ್ಯೂಬ್ ಸ್ಥಾನ ಪಡೆದಿದ್ದು, ವಿಕೆಟ್ ಕೀಪರ್ ಆಗಿ ಮೊಹಮ್ಮದ್ ಹ್ಯಾರಿಸ್ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ವೇಗಿಗಳಾಗಿ ಹ್ಯಾರಿಸ್ ರೌಫ್, ಮೊಹಮ್ಮದ್ ವಾಸಿಂ ಜೂನಿಯರ್ ಹಾಗೂ ಶಾಹೀನ್ ಅಫ್ರಿದಿ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ. ಇವರೊಂದಿಗೆ ಸ್ಪಿನ್ನರ್ಗಳಾಗಿ ಅಬ್ರಾರ್ ಅಹ್ಮದ್, ಸುಫಿಯಾನ್ ಮುಖಿಮ್ ಕೂಡ ಪಾಕ್ ಪಡೆಯಲ್ಲಿ ಸ್ಥಾನ ಪಡೆದಿದ್ದಾರೆ.
ಏಷ್ಯಾಕಪ್ಗೆ ಪಾಕಿಸ್ತಾನ್ ಟಿ20 ತಂಡ ಈ ಕೆಳಗಿನಂತಿದೆ:
ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಹಸನ್ ನವಾಝ್, ಹುಸೇನ್ ತಲತ್, ಖುಷ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ಸಾಹಿಬ್ಝಾದ್ ಫರ್ಹಾನ್, ಶಾಹೀನ್ ಅಫ್ರಿದಿ, ಸಲ್ಮಾನ್ ಮಿರ್ಝಾ, ಸೈಮ್ ಅಯ್ಯೂಬ್ ಮತ್ತು ಸುಫಿಯಾನ್ ಮುಖಿಮ್