ಮುಂಬೈ, ಆ. 24 (DaijiworldNews/AA): ಚೇತೇಶ್ವರ ಪೂಜಾರ ಅವರು ಎಲ್ಲ ಮಾದರಿಯ ಕ್ರಿಕೆಟ್ಗೆ ಇಂದು ನಿವೃತ್ತಿ ಘೋಷಿಸಿದ್ದಾರೆ.

ಈ ಕುರಿತು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, "ಟೀಂ ಇಂಡಿಯಾ ಜೆರ್ಸಿಯನ್ನ ಧರಿಸಿ ರಾಷ್ಟ್ರಗೀತೆ ಹಾಡುವುದು, ಪ್ರತಿ ಬಾರಿ ಮೈದಾನಕ್ಕಿಳಿದಾಗ ನನ್ನ ಅತ್ಯುತ್ತಮ ಪ್ರಯತ್ನ ಮಾಡುವುದು ಇದೆಲ್ಲವೂ ಪದಗಳಲ್ಲಿ ವರ್ಣಿಸಲು ಅಸಾಧ್ಯ. ಆದ್ರೆ ಎಲ್ಲ ಒಳ್ಳೇ ವಿಷಯಗಳೂ ಎಂದಾದರೂ ಕೊನೆಗೊಳ್ಳಬೇಕಲ್ಲವೇ? ಅದೇ ರೀತಿ ನಾನು ಎಲ್ಲಾ ಮಾದರಿಯ ಕ್ರಿಕೆಟ್ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ, ಎಲ್ಲರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು" ಡಂದು ಭಾವುಕ ಸಂದೇಶವನ್ನ ಶೇರ್ ಮಾಡಿದ್ದಾರೆ.
ಚೇತೇಶ್ವರ ಪೂಜಾರ 2010ರಲ್ಲಿ ಟೀಂ ಇಂಡಿಯಾಕ್ಕೆ ಪದಾರ್ಪಣೆ ಮಾಡಿದರು. ಟೀಂ ಇಂಡಿಯಾದಲ್ಲಿ ಅತಿಹೆಚ್ಚು ರನ್ ಗಳಿಸಿದ 8ನೇ ಟೆಸ್ಟ್ ಬ್ಯಾಟರ್ ಎಂಬ ಹೆಗ್ಗಳಿಕೆ ಅವರು ಪಾತ್ರರಾಗಿದ್ದಾರೆ. ಅವರು ಇದುವರೆಗೆ 103 ಟೆಸ್ಟ್, 5 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಟೀಂ ಇಂಡಿಯಾ ಪರ 103 ಟೆಸ್ಟ್ ಪಂದ್ಯಗಳಲ್ಲಿ 43.60 ಸರಾಸರಿಯಲ್ಲಿ 7,195 ರನ್ ಗಳಿಸಿದ್ದಾರೆ. ಇದರಲ್ಲಿ 19 ಶತಕಗಳು ಮತ್ತು 35 ಅರ್ಧಶತಕಗಳು ಸೇರಿವೆ. ಪೂಜಾರ ಜೂನ್ 2023 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು. ಇದೀಗ 20 ವರ್ಷಗಳ ತಮ್ಮ ದೀರ್ಘಾವಧಿಯ ಕ್ರಿಕೆಟ್ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ.