ಕಾರ್ಕಳ, ಆ. 25 (DaijiworldNews/AA): ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ಕಾರ್ಕಳದ ಕ್ರೈಸ್ಟ್ಕಿಂಗ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಐಶ್ವರ್ಯ ಆಯ್ಕೆಯಾಗಿದ್ದಾರೆ.

ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲಾ ಪಂಚಾಯತ್ ಮತ್ತು ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಂಯುಕ್ತ ಆಶ್ರಯದಲ್ಲಿ ಪೆರ್ವಾಜೆ ಸುಂದರ ಪುರಾಣಿಕ್ ಸ್ಮಾರಕ ಪ್ರೌಢ ಶಾಲೆಯಲ್ಲಿ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಹೆಣ್ಣುಮಕ್ಕಳ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ ಆಯೋಜಿಸಲಾಗಿತ್ತು.
ಈ ಸ್ಪರ್ಧೆಯಲ್ಲಿ, ಕಾರ್ಕಳದ ಕ್ರೈಸ್ಟ್ಕಿಂಗ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ೮ನೇ ತರಗತಿ ವಿದ್ಯಾರ್ಥಿನಿ ಐಶ್ವರ್ಯ ರಾಜ್ಯ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಅದೇ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಡೆಲ್ಸಿಯಾ ಡಿ'ಸೋಜಾ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.