ಬೆಂಗಳೂರು, ಸೆ. 03 (DaijiworldNews/AA): ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಪಾಲಿಗೆ ಜೂನ್ 4 ಕರಾಳ ದಿನವಾಗಿತ್ತು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಈ ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಿಂದಾಗಿ 11 ಅಭಿಮಾನಿಗಳು ಮೃತಪಟ್ಟಿದ್ದರು. ಇನ್ನೂ ಹಲವರು ಗಾಯಗೊಂಡಿದ್ದರು.

"ಜೂನ್ 4 ರಂದು ನಡೆದ ಹೃದಯವಿದ್ರಾವಕ ಘಟನೆಯನ್ನು ನಾವು ಜೀವನದಲ್ಲೇ ನಿರೀಕ್ಷಿಸಿರಲಿಲ್ಲ. ನಮ್ಮ ಫ್ರಾಂಚೈಸಿಯ ಇತಿಹಾಸದಲ್ಲಿ ಅತ್ಯಂತ ಸಂತೋಷದಾಯಕ ಕ್ಷಣವಾಗಿರಬೇಕಾಗಿತ್ತು. ಆದರೆ ದುರಂತವಾಗಿ ಮಾರ್ಪಟ್ಟಿತು" ಎಂದು ಈ ದುರಂತದ ಬಗ್ಗೆ ವಿರಾಟ್ ಕೊಹ್ಲಿ ಕೂಡ ದುಃಖ ವ್ಯಕ್ತಪಡಿಸಿದ್ದಾರೆ.
"ನಾವು ಕಳೆದುಕೊಂಡವರ ಕುಟುಂಬಗಳಿಗಾಗಿ ಮತ್ತು ಗಾಯಗೊಂಡ ನಮ್ಮ ಅಭಿಮಾನಿಗಳ ಬಗ್ಗೆ ಯೋಚಿಸುತ್ತಿದ್ದೇನೆ ಮತ್ತು ಪ್ರಾರ್ಥಿಸುತ್ತಿದ್ದೇನೆ. ನಿಮ್ಮ ನಷ್ಟವು ಈಗ ನಮ್ಮ ಕಥೆಯ ಭಾಗವಾಗಿದೆ. ಒಟ್ಟಾಗಿ, ನಾವು ಕಾಳಜಿ, ಗೌರವ ಮತ್ತು ಜವಾಬ್ದಾರಿಯೊಂದಿಗೆ ಮುಂದುವರಿಯುತ್ತೇವೆ" ಎಂದು ವಿರಾಟ್ ಕೊಹ್ಲಿ ಹೇಳಿದ್ದನ್ನು ಉಲ್ಲೇಖಿಸಿ ಆರ್ಸಿಬಿ ಇದೀಗ ಪೋಸ್ಟ್ವೊಂದನ್ನು ಶೇರ್ ಮಾಡಿದೆ.