ಮುಂಬೈ, ಸೆ. 06 (DaijiworldNews/AK):ಸೆಪ್ಟೆಂಬರ್ 9 ರಿಂದ ಯುಎಇಯಲ್ಲಿ ಟಿ20 ಏಷ್ಯಾಕಪ್ ಶುರುವಾಗಲಿದೆ. ಈ ಟೂರ್ನಿಗೆ ಎಲ್ಲಾ ತಂಡಗಳು ಈಗಾಗಲೇ ಅಂತಿಮ ಹಂತದ ಸಿದ್ಧತೆಯಲ್ಲಿವೆ. ಇತ್ತ ಟೀಂ ಇಂಡಿಯಾ ಕೂಡ ತರಬೇತಿಯಲ್ಲಿ ನಿರತವಾಗಿದೆ.

ಈ ನಡುವೆ ಮತ್ತೊಂದು ಸರಣಿಗಾಗಿ ಭಾರತ ಎ ತಂಡವನ್ನು ಇಂದು ಬಿಸಿಸಿಐ ಪ್ರಕಟಿಸಿದೆ. ವಾಸ್ತವವಾಗಿ ಭಾರತ ಎ ತಂಡ ಆಸ್ಟ್ರೇಲಿಯಾ ಎ ವಿರುದ್ಧ ಇದೇ ಸೆಪ್ಟೆಂಬರ್ 16 ರಿಂದ ನಾಲ್ಕು ದಿನಗಳ 2 ಪಂದ್ಯಗಳನ್ನು ಆಡಲಿದೆ. ಈ ಸರಣಿಯಲ್ಲಿ ಭಾರತ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಧ್ರುವ್ ಜುರೆಲ್ ಅವರಿಗೆ ಉಪನಾಯಕತ್ವದ ಜವಾಬ್ದಾರಿಯನ್ನು ನೀಡಲಾಗಿದೆ.
ಆಸ್ಟ್ರೇಲಿಯಾ-ಎ ಮತ್ತು ಭಾರತ-ಎ ನಡುವಿನ ನಾಲ್ಕು ದಿನಗಳ 2 ಪಂದ್ಯಗಳಲ್ಲಿ ಮೊದಲ ಪಂದ್ಯ ಸೆಪ್ಟೆಂಬರ್ 16 ರಿಂದ 19 ರವರೆಗೆ ಲಕ್ನೋದಲ್ಲಿ ನಡೆಯಲಿದೆ. ಎರಡನೇ ಪಂದ್ಯ ಸೆಪ್ಟೆಂಬರ್ 23 ರಿಂದ 26 ರವರೆಗೆ ಲಕ್ನೋದಲ್ಲಿ ನಡೆಯಲಿದೆ. ಇದರ ನಂತರ, ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 5 ರವರೆಗೆ ಕಾನ್ಪುರದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ.
ಭಾರತ-ಎ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಮನ್ಯು ಈಶ್ವರನ್, ನಾರಾಯಣ್ ಜಗದೀಸನ್ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ಧ್ರುವ್ ಜುರೆಲ್ (ಉಪನಾಯಕ ಮತ್ತು ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಹರ್ಷ್ ದುಬೆ, ಆಯುಷ್ ಬಡೋನಿ, ನಿತೀಶ್ ಕುಮಾರ್ ರೆಡ್ಡಿ, ತನುಷ್ ಕೋಟ್ಯಾನ್, ಕೆ. ಸುತಾರ್, ಯಶ್ ಠಾಕೂರ್.