ಮುಂಬೈ, , ನ. 19 (DaijiworldNews/AK): ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮುಂಬರುವ ಅಂಡರ್-19 ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಝಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯು ಜನವರಿ 15 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಫೆಬ್ರವರಿ 6, 2026 ರಂದು ಹರಾರೆ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆಯಲಿದೆ.

19 ವರ್ಷದೊಳಗಿನವರ ಪುರುಷರ ಏಕದಿನ ವಿಶ್ವಕಪ್ನಲ್ಲಿ 16 ತಂಡಗಳು ಕಣಕ್ಕಿಳಿಯಲಿದ್ದು, ಒಟ್ಟು 41 ಪಂದ್ಯಗಳು ನಡೆಯಲಿದೆ. ಭಾರತ ತಂಡವು ಮೊದಲ ಸುತ್ತಿನಲ್ಲಿ ಮೂರು ಎದುರಾಳಿಗಳನ್ನು ಎದುರಿಸಲಿದೆ.
ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಯುಎಸ್ಎ ವಿರುದ್ಧ ಆಡಲಿದ್ದು, ಇದಾದ ಬಳಿಕ ಬಾಂಗ್ಲಾದೇಶ್ ಮತ್ತು ನ್ಯೂಝಿಲೆಂಡ್ ತಂಡಗಳನ್ನು ಎದುರಿಸಲಿದೆ.