ಬೆಂಗಳೂರು, ಮಾ. 29 (DaijiworldNews/AA): ಇಂಡಿಯನ್ ಪ್ರೀಮಿಯರ್ ಲೀಗ್ನ 19ನೇ ಆವೃತ್ತಿಯ ತನ್ನ ಮೊದಲ ಪಂದ್ಯವನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಜೊತೆಗೆ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ ಹೆಸರಿಗೆ 10 ದಾಖಲೆಗಳು ಸೇರ್ಪಡೆಗೊಂಡಿವೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿ 9 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಆರ್ಸಿಬಿ 15.4 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 203 ರನ್ ಗಳಿಸಿ ಭರ್ಜರಿ ಜಯ ಸಾಧಿಸಿತು.
ಸಿಕ್ಸ್ ಸಿಡಿಸಿ ಈ ಟೂರ್ನಿಯಲ್ಲಿ ಖಾತೆ ಆರಂಭಿಸಿದ ಪಡಿಕ್ಕಲ್ ಕೇವಲ 26 ಎಸೆತಗಳಲ್ಲಿ 61 ರನ್ ಗಳಿಸಿದರು. ವಿರಾಟ್ ಕೊಹ್ಲಿ 38 ಎಸೆತಗಳಲ್ಲಿ 69 ರನ್ ಗಳಿಸಿದರೆ ರಜತ್ ಪಾಟಿದರ್ 12 ಎಸೆತಗಳಲ್ಲಿ 31 ರನ್ ಹೊಡೆದರು. ಜೇಕಬ್ ಡಫಿ ಮತ್ತು ರೋಮಾರಿಯೋ ಶೆಫರ್ಡ್ ತಲಾ ಮೂರು ವಿಕೆಟ್ ಗಳಿಸಿದರೆ, ಭುವನೇಶ್ವರ್ ಕುಮಾರ್, ಅಭಿನಂದನ್ ಸಿಂಗ್, ಸುಯೇಶ್ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದು ತಂಡದ ಗೆಲುವಿಗೆ ಕಾರಣರಾದರು.
ಮೊದಲ ಪಂದ್ಯದಲ್ಲೇ 69 ರನ್ಗಳೊಂದಿಗೆ ಉತ್ತಮ ಪ್ರದರ್ಶನ ನೀಡುವ ಮೂಲಕ ಕೊಹ್ಲಿ ಹಲವು ದಾಖಲೆಗಳನ್ನ ನಿರ್ಮಿಸಿದ್ದಾರೆ.
* ಐಪಿಎಲ್ ಇತಿಹಾಸದಲ್ಲೇ ಚೇಸಿಂಗ್ನಲ್ಲಿ 4000 ರನ್ ಕಲೆಹಾಕಿದ ಮೊದಲ ಬ್ಯಾಟರ್.
* ಐಪಿಎಲ್ ಪಂದ್ಯಗಳಲ್ಲಿ ಅತಿ ಹೆಚ್ಚು ಬಾರಿ ತಂಡದ ಪರ ಅತ್ಯಧಿಕ ರನ್ ಗಳಿಸಿದ ಆಟಗಾರ.
* ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 50+ ಸ್ಕೋರ್ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟ ಆಟಗಾರ.
* ಐಪಿಎಲ್ನಲ್ಲಿ 50+ ಸ್ಕೋರ್ಗಳಿಸಿ ಅತ್ಯಧಿಕ ಬಾರಿ ಅಜೇಯರಾಗಿ ಉಳಿದ ಬ್ಯಾಟರ್.
* ಯಶಸ್ವಿ ಚೇಸಿಂಗ್ ವೇಳೆ ಅತೀ ಹೆಚ್ಚು ಬಾರಿ 50+ ಸ್ಕೋರ್ಗಳಿಸಿದ ಬ್ಯಾಟರ್.
* ಎಸ್ಆರ್ಹೆಚ್ ತಂಡದ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಆಟಗಾರ.
* ಐಪಿಎಲ್ ನಲ್ಲೇ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಭಾರತೀಯ ಓಪನರ್.
* ಐಪಿಎಲ್ ಇತಿಹಾಸದಲ್ಲಿ 150+ ಸ್ಟ್ರೈಕ್ ರೇಟ್ನಲ್ಲಿ ಅತಿ ಹೆಚ್ಚು ಬಾರಿ ಟಾಪ್ ಸ್ಕೋರರ್ ಆಗಿ ಹೊರಹೊಮ್ಮಿದ್ದ ಬ್ಯಾಟರ್.
* ಐಪಿಎಲ್ ಇತಿಹಾಸದಲ್ಲಿ ಒಂದೇ ತಂಡದ ಪರ 19 ಸೀಸನ್ ಆಡಿದ ಏಕೈಕ ಆಟಗಾರ.
* ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿಯಲ್ಲಿ ಆರನೇ ಸ್ಥಾನ.