ಮುಂಬೈ, ಜೂ. 19 (DaijiworldNews/AA): ಭಾರತ ತಂಡದ ಸ್ಟಾರ್ ಆಲ್ರೌಂಡರ್ ಶ್ರೇಯಾಂಕ ಪಾಟೀಲ್ ಗಾಯದಿಂದಾಗಿ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಬುಧವಾರ ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಶ್ರೇಯಾಂಕ ಪಾಟೀಲ್ ಗಾಯಕ್ಕೆ ತುತ್ತಾಗಿದ್ದರು. ನೆದರ್ಲ್ಯಾಂಡ್ಸ್ ಇನ್ನಿಂಗ್ಸ್ನ 6ನೇ ಓವರ್ ಬೌಲ್ ಮಾಡಿದ ಬಳಿಕ ಚೆಂಡನ್ನು ಹಿಡಿಯಲು ಅದರ ಹಿಂದೆ ಶ್ರೇಯಾಂಕ ಓಡಿದ್ದಾರೆ. ಚೆಂಡಿನ ಬಳಿ ಹೋದ ಶ್ರೇಯಾಂಕ ಅದನ್ನು ತೆಗೆದುಕೊಳ್ಳಲು ಕೆಳಕ್ಕೆ ಬಾಗಿದ್ದಾರೆ. ಈ ಪ್ರಕ್ರಿಯೆಯಲ್ಲಿ ಶ್ರೇಯಾಂಕ ಸಮತೋಲನ ಕಳೆದುಕೊಂಡರು. ಹೀಗಾಗಿ ಅವರ ಬಲಗಾಲು ಉಳುಕಿದೆ.
ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಪಾದದ ಗಾಯಕ್ಕೆ ತುತ್ತಾಗಿರುವ ಕಾರಣ, ಚೇತರಿಕೆಗೆ ಸಮಯದ ಅಗತ್ಯವಿದೆ. ಆದ್ದರಿಂದ ಅವರು ಮುಂದಿನ ಎಲ್ಲಾ ವಿಶ್ವಕಪ್ ಪಂದ್ಯಗಳಿಂದ ಹೊರಗೊಳಿಯಲಿದ್ದಾರೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದುಬಂದಿದೆ.
ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿರುವ ಶ್ರೇಯಾಂಕ ಅವರ ಬದಲಿಗೆ ಅನ್ಕ್ಯಾಪ್ಡ್ ಲೆಗ್ ಸ್ಪಿನ್ನರ್ ಪ್ರೇಮಾ ರಾವತ್ ಅವರನ್ನು ಭಾರತ ತಂಡಕ್ಕೆ ಸೇರಿಸಿಕೊಳ್ಳಲು ಐಸಿಸಿ ಮಹಿಳಾ ಟಿ20 ವಿಶ್ವಕಪ್ನ ತಾಂತ್ರಿಕ ಸಮಿತಿ ಒಪ್ಪಿಗೆ ಸೂಚಿಸಿದೆ. ಟೂರ್ನಿಯಲ್ಲಿ ಆರಂಭಿಕ 2 ಪಂದ್ಯಗಳನ್ನ ಗೆದ್ದು ಭರ್ಜರಿ ಮುನ್ನಡೆ ಕಾಯ್ದುಕೊಂಡಿರುವ ಭಾರತ ತಂಡಕ್ಕೆ ಶ್ರೇಯಾಂಕಾ ಪಾಟೀಲ್ ಅವರ ಅಲಭ್ಯತೆ ತಂಡಕ್ಕೆ ದೊಡ್ಡ ಹೊಡೆತ ನೀಡಿದಂತಾಗಿದೆ.