ಮುಂಬೈ, ಜೂ. 21 (DaijiworldNews/AA): ಜುಲೈ ತಿಂಗಳಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವೆ ಟಿ20 ಹಾಗೂ ಏಕದಿನ ಸರಣಿಗೆ ಭಾರತ ತಂಡ ಪ್ರಕಟವಾಗಿದೆ.

ಜುಲೈ 1 ರಿಂದ ಆರಂಭವಾಗಲಿರುವ ಟಿ20 ಸರಣಿ ಜುಲೈ 11 ರವರೆಗೆ ನಡೆಯಲಿದೆ. ಈ ಸರಣಿಗಾಗಿ ಭಾರತ ತಂಡ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಈ ಪ್ರವಾಸದಲ್ಲಿ ಮೊದಲಿಗೆ ಉಭಯ ತಂಡಗಳ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಈಗಾಗಲೇ ಈ ಸರಣಿಗಾಗಿ ಬಿಸಿಸಿಐ ತಂಡವನ್ನು ಸಹ ಪ್ರಕಟಿಸಿತ್ತು.
ಟಿ20 ಸರಣಿಯ ಬಳಿಕ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಈ ಏಕದಿನ ಸರಣಿಯು ಜುಲೈ 14 ರಿಂದ ಜುಲೈ 19 ರವರೆಗೆ ನಡೆಯಲಿದೆ. ಇದೀಗ ಈ ಏಕದಿನ ಸರಣಿಗಾಗಿ ಬಿಸಿಸಿಐ 15 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ.
ಈ ಸರಣಿಗೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾರನ್ನು ಆಯ್ಕೆ ಮಾಡಲಾಗಿದ್ದು, ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ಇನ್ನು ಈ ಬಾರಿ ಹಲವು ಯುವ ಆಟಗಾರರಿಗೂ ತಂಡದಲ್ಲಿ ಅವಕಾಶ ನೀಡಲಾಗಿದೆ.
ಭಾರತ ತಂಡವನ್ನು ಶುಭ್ಮನ್ ಗಿಲ್ ಮುನ್ನಡೆಸಲಿದ್ದು, ಶ್ರೇಯಸ್ ಅಯ್ಯರ್ ಅವರನ್ನು ಉಪನಾಯಕನಾಗಿ ಆಯ್ಕೆ ಮಾಡಲಾಗಿದೆ. ಆದರೆ ಯಶಸ್ವಿ ಜೈಸ್ವಾಲ್ರನ್ನು ಹಾಗೂ ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ಕಾರಣ ಹಾರ್ದಿಕ್ ಪಾಂಡ್ಯರನ್ನು ಈ ಸರಣಿಯಿಂದ ಕೈಬಿಡಲಾಗಿದೆ.
ಇಂಗ್ಲೆಂಡ್ ಪ್ರವಾಸಕ್ಕಾಗಿ ಭಾರತ ಏಕದಿನ ತಂಡ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್.