ಐರ್ಲೆಂಡ್, ,ಜೂ. 26 (DaijiworldNews/AK):ಭಾರತ ಹಾಗೂ ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಐರ್ಲೆಂಡ್ನ ರಾಜಧಾನಿ ಬೆಲ್ಫಾಸ್ಟ್ನಲ್ಲಿರುವ ಸಿವಿಲ್ ಸರ್ವಿಸ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ಆರಂಭವಾಗಿದೆ.

ನಾಯಕನಾಗಿ ಶ್ರೇಯಸ್ ಅಯ್ಯರ್ಗೆ ಇದು ಮೊದಲ ಪಂದ್ಯವಾಗಿದೆ. ಚೊಚ್ಚಲ ಪಂದ್ಯದಲ್ಲೇ ಟಾಸ್ ಗೆದ್ದ ಶ್ರೇಯಸ್ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ. ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗದ ಬಗ್ಗೆ ಮಾಹಿತಿ ಹೊರಬಿದ್ದಿದೆ.
ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳ ಏಕೈಕ ಪ್ರಶ್ನೆಯಾದ ವೈಭವ್ ಸೂರ್ಯವಂಶಿ ಮೊದಲ ಟಿ20 ಪಂದ್ಯವನ್ನು ಆಡುತ್ತಾರಾ ಎಂಬುದಕ್ಕೆ ಉತ್ತರ ಸಿಕ್ಕಿದೆ. ಅಭಿಮಾನಿಗಳಿಗೆ ಟೀಂ ಇಂಡಿಯಾದಿಂದ ನಿರಾಶೆಯ ಉತ್ತರ ಎದುರಾಗಿದ್ದು, ಮೊದಲ ಟಿ20 ಪಂದ್ಯದಲ್ಲಿ ವೈಭವ್ ಆಡುತ್ತಿಲ್ಲ.
ಟಾಸ್ ಗೆದ್ದ ನಂತರ ಮಾತನಾಡಿದ ಶ್ರೇಯಸ್ ಅಯ್ಯರ್, ಸೂರ್ಯವಂಶಿ ಈ ಪಂದ್ಯದಲ್ಲಿ ಏಕೆ ಆಡುತ್ತಿಲ್ಲ ಎಂಬುದನ್ನು ವಿವರಿಸಿದರು. ‘ಸೂರ್ಯವಂಶಿ ಒಬ್ಬ ಅದ್ಭುತ ಆಟಗಾರ, ಆದರೆ ಅವರು ಈ ಪಂದ್ಯದಲ್ಲಿ ಬೆಂಚ್ ಕಾಯಬೇಕಾಗುತ್ತದೆ. ನಾವು ನಮ್ಮ ಅನುಭವಿ ಆಟಗಾರರನ್ನೇ ತಂಡದಲ್ಲಿ ಮುಂದುವರೆಸಲು ನಿರ್ಧರಿಸಿದ್ದೇವೆ. ಹೀಗಾಗಿ ಈ ಪಂದ್ಯದಲ್ಲಿ ವೈಭವ್ ಆಡುತ್ತಿಲ್ಲ. ಸಮಯ ಬಂದಾಗ ಸೂರ್ಯವಂಶಿಗೆ ಅವಕಾಶ ಸಿಗುತ್ತದೆ’ ಎಂದರು
ಉಭಯ ತಂಡಗಳು
ಭಾರತ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ತಿಲಕ್ ವರ್ಮಾ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್ ಮತ್ತು ಪ್ರಸಿದ್ಧ್ ಕೃಷ್ಣ.
ಐರ್ಲೆಂಡ್ ತಂಡ: ಟಿಮ್ ಟೆಕ್ಟರ್, ರಾಯ್ ಅಡೈರ್, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್, ಬೆಂಜಮಿನ್ ಕ್ಯಾಲಿಟ್ಜ್, ಗ್ಯಾರೆತ್ ಡೆಲಾನಿ, ಜಾರ್ಜ್ ಡಾಕ್ರೆಲ್, ಲಿಯಾಮ್ ಮೆಕಾರ್ಥಿ, ಮ್ಯಾಥ್ಯೂ ಹಂಫ್ರೀಸ್, ಜೇ ಮುಂದ್ರಾ, ಮ್ಯಾಥ್ಯೂ ಹೊಲ್ಲಾರ್ಡ್.