ನ್ಯೂಯಾರ್ಕ್, ಜು. 06 (DaijiworldNews/AA): 2026ರ ಫಿಫಾ ವಿಶ್ವಕಪ್ ಪ್ರೀ-ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ನಾರ್ವೆ ವಿರುದ್ಧ 1-2 ಗೋಲುಗಳ ಅಂತರದಿಂದ 5 ಬಾರಿಯ ಚಾಂಪಿಯನ್ ಬ್ರೆಜಿಲ್ ತಂಡವು ಸೋಲನ್ನನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಬ್ರೆಜಿಲ್ ತಂಡದ ಸ್ಟಾರ್ ಆಟಗಾರ ನೇಮರ್ ಜೂನಿಯರ್ ಅಂತರರಾಷ್ಟ್ರೀಯ ಫುಟ್ಬಾಲ್ಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ.

2010 ರಲ್ಲಿ ಅಮೆರಿಕದ ನ್ಯೂಜೆರ್ಸಿಯ 'ಮೆಟ್ಲೈಫ್ ಸ್ಟೇಡಿಯಂ'ನಲ್ಲಿ ಅಮೆರಿಕ ವಿರುದ್ಧ ಕಣಕ್ಕಿಳಿಯುವ ಮೂಲಕ ನೇಮರ್ ಅಂತರರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದರು. ಇದೀಗ ಅದೇ ಮೈದಾನದಲ್ಲಿ ಅವರು ಕೊನೆಯ ಪಂದ್ಯವನ್ನು ಆಡಿ ತಮ್ಮ 16 ವರ್ಷಗಳ ಸುದೀರ್ಘ ಅಂತರರಾಷ್ಟ್ರೀಯ ಕೆರಿಯರ್ಗೆ ಗುಡ್ಬೈ ಹೇಳಿದ್ದಾರೆ.
ನಿವೃತ್ತಿ ಬಗ್ಗೆ ಮಾತನಾಡಿದ ಅವರು, "ನಾನು ದೇಶಕ್ಕಾಗಿ ವಿಶ್ವಕಪ್ ಗೆಲ್ಲಲು ತುಂಬಾ ಪ್ರಯತ್ನಿಸಿದೆ. ಆದರೆ ವಿಧಿ ಬೇರೆಯದೇ ಇತ್ತು. ನಾನು ಎಲ್ಲಿಂದ ವೃತ್ತಿಜೀವನ ಆರಂಭಿಸಿದ್ದೆನೋ ಇಂದಿಗೆ ಇಲ್ಲೇ ಮುಗಿಸುತ್ತಿದ್ದೇನೆ" ಎಂದು ಕಣ್ಣೀರು ಹಾಕಿದ್ದಾರೆ.