ಹರಾರೆ, ಜು. 24 (DaijiworldNews/AA): ಹರಾರೆಯಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್ಗಳಿಂದ ಗೆದ್ದುಕೊಂಡಿತು. ಈ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ 18 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿತು. ಈ ಗುರಿಯನ್ನ ಬೆನ್ನತ್ತಿದ ಭಾರತ 40 ಬಾಲ್ಗಳು ಬಾಕಿ ಇರುವಾಗಲೇ ಭರ್ಜರಿ ಗೆಲುವು ಸಾಧಿಸಿದೆ. ಇನ್ನು ಈ ಗೆಲುವಿನೊಂದಿಗೆ ಶ್ರೇಯಸ್ ಅಯ್ಯರ್ ನಾಯಕನಾಗಿ ತಮ್ಮ ಗೆಲುವಿನ ಖಾತೆಯನ್ನು ತೆರೆದಿದ್ದಾರೆ.
ಈ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಸಿಡಿಸಿದ ಸ್ಫೋಟಕ ಫಿಫ್ಟಿ ನೆರವಿನಿಂದ ಜಿಂಬಾಬ್ವೆ ವಿರುದ್ಧ ಭಾರತ ತಂಡ ಗೆಲುವು ಸಾಧಿಸಲು ಸುಲಭವಾಯಿತು. ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ಕೇವಲ 18 ಎಸೆತಗಳಲ್ಲಿ ವೈಭವ್ ಅರ್ಧಶತಕ ಬಾರಿಸಿದ್ದಾರೆ. ಈ ಮೂಲಕ ವೈಭವ್ ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಅರ್ಧಶತಕ ಬಾರಿಸಿದ ಕಿರಿಯ ಆಟಗಾರ ಎಂಬ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ವೈಭವ್ ಮುರಿದಿದ್ದಾರೆ.