ಗ್ಲಾಸ್ಕೊ, ಜು. 25 (DaijiworldNews/AA): ಕಾಮನ್ವೆಲ್ತ್ ಗೇಮ್ಸ್ನ ಪುರುಷರ ಹೆವಿವೇಯ್ಟ್ ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಪೋಲಿಯೊ ಪೀಡಿತ ಝಂದು ಕುಮಾರ್ ಕಂಚಿನ ಪದಕವನ್ನ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಶುಕ್ರವಾರ ಆರಂಭವಾಗಿರುವ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತ ಖಾತೆ ತೆರೆದಿದೆ.

ಝಂದು ಕುಮಾರ್ ಅವರು ತಮ್ಮ ಮೊದಲ ಪ್ರಯತ್ನದಲ್ಲಿ 181 ಕೆ.ಜಿ, 2ನೇ ಪ್ರಯತ್ನದಲ್ಲಿ 190 ಕೆ.ಜಿ ತೂಕವನ್ನು ಎತ್ತಿದರು. ತಮ್ಮ ಮೂರನೇ ಪ್ರಯತ್ನದಲ್ಲಿ 196 ಕೆ.ಜಿ ತೂಕ ಎತ್ತುವಲ್ಲಿ ವಿಫಲರಾದ ಹಿನ್ನೆಲೆ ಅವರು ಒಟ್ಟು 130.9 ಪಾಯಿಂಟ್ ಪಡೆದು 3ನೇ ಸ್ಥಾನ ಗಳಿಸಿದರು.
ನೈಜೀರಿಯಾದ ಇಡ್ರಿಸ್ ರಿಲುವಾನ್ 132.8 ಪಾಯಿಂಟ್ಗಳೊಂದಿಗೆ ಚಿನ್ನದ ಪದಕ, ಬ್ರಿಟನ್ನ ಮ್ಯಾಥ್ಯ ಹಾರ್ಡಿಂಗ್ 131 ಪಾಯಿಂಟ್ ಗಳಿಸುವ ಮೂಲಕ ಬೆಳ್ಳಿ ಪದಕವನ್ನ ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಇದೇ ಸ್ಪರ್ಧೆಯಲ್ಲಿದ್ದ ಭಾರತದ ಮತ್ತೋರ್ವ ಕ್ರೀಡಾಪಟು ಸುಧೀರ್ ಅವರು 114.1 ಪಾಯಿಂಟ್ ಗಳಿಸಿ 6ನೇ ಸ್ಥಾನ ಪಡೆದರು.