ಗ್ಲಾಸ್ಗೊ, ಜು. 29 (DaijiworldNews/AA): 2026ರ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಉದಯೋನ್ಮುಖ ಅಥ್ಲಿಟ್ ಗುಲ್ವೀರ್ ಸಿಂಗ್ ಅವರು 10,000 ಮೀಟರ್ ಓಟ ಸ್ಪರ್ಧೆಯಲ್ಲಿ ಬೆಳ್ಳಿ ಹಾಗೂ ಭಾರತದ ಹರ್ಜಿಂದರ್ ಕೌರ್ ಅವರು ಮಹಿಳೆಯರ 69 ಕೆಜಿ ವೇಟ್ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಗುಲ್ವೀರ್ 27 ನಿಮಿಷ 49.78 ಸೆಕೆಂಡುಗಳಲ್ಲಿ 10,000 ಮೀಟರ್ ಗುರಿ ತಲುಪಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು. ಈ ಮೂಲಕ ಗುಲ್ವೀರ್ ಈ ಸ್ಪರ್ಧೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಇನ್ನು ಹರ್ಜಿಂದರ್ ಕೌರ್ ಮಹಿಳೆಯರ 69 ಕೆ.ಜಿ. ವೇಟ್ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನ ತಮ್ಮದಾಗಿಸಿಕೊಂಡರು. ಈ ಮೂಲಕ ಅವರು ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಭಾರತಕ್ಕೆ 7ನೇ ಪದಕ ತಂದುಕೊಟ್ಟಿದ್ದಾರೆ.