ಗಾಲ್ಲೆ, ಆ. 19 (DaijiworldNews/AA): ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಭಾರತ ಕ್ರಿಕೆಟ್ ತಂಡವು 165 ರನ್ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದೆ.

ಗಾಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯಾವಳಿ ನಡೆಯಿತು. ದ್ವಿತೀಯ ಇನಿಂಗ್ಸ್ನಲ್ಲಿ ಭಾರತ ನೀಡಿದ 372 ರನ್ಗಳ ಬೃಹತ್ ಗುರಿ ಬೆನ್ನಟ್ಟಿದ್ದ ಶ್ರೀಲಂಕಾ 206 ರನ್ ಗಳಿಗೆ ಆಲೌಟ್ ಅಯಿತು.
ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶುಭ್ ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಮೊದಲ ಇನಿಂಗ್ಸ್ ನಲ್ಲಿ 462 ರನ್ ಗಳಿಸಿತು. ಬಳಿಕ ಪ್ರಥಮ ಇನಿಂಗ್ಸ್ ಆಡಿದ ಶ್ರೀಲಂಕಾ ತಂಡವು ಕೇವಲ 284 ರನ್ ಗಳಿಗೆ ಆಲೌಟ್ ಆಯಿತು.
ಎರಡನೇ ಇನ್ನಿಂಗ್ಸ್ನಲ್ಲಿ ಭಾರತ 193 ರನ್ ಗಳಿಸಿ ಆಲೌಟ್ ಆಯ್ತು. ಈ ಮೂಲಕ 372 ರನ್ಗಳ ಗುರಿ ಬೆನ್ನತ್ತಿದ ಶ್ರೀಲಂಕಾ 206 ರನ್ ಗಳಿಗೆ ಎಲ್ಲಾ ವಿಕೆಟ್ ಗಳನ್ನು ಕಳೆದುಕೊಂಡಿತು.
ಇನ್ನು ಈ ಗೆಲುವಿನ ಮೂಲಕ ಭಾರತ 2 ಟೆಸ್ಟ್ ಪಂದ್ಯದ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. 2ನೇ ಟೆಸ್ಟ್ ಪಂದ್ಯವು ಆಗಸ್ಟ್ 23-27ರವರೆಗೆ ಕೊಲಂಬೋದಲ್ಲಿ ನಡೆಯಲಿದೆ.