ದುಬೈ,ಸೆ. 05 (DaijiworldNews/AK): ಮಹಿಳಾ ಟಿ20 ಏಷ್ಯಾಕಪ್ ಟೂರ್ನಿಯಲ್ಲಿ ಇಂದು ದುಬೈನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿವೆ.

ಹಾಂಕಾಂಗ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯಾಗಿ ಸ್ಮೃತಿ ಮಂಧಾನ ಇಂದು ಪಾಕ್ ವಿರುದ್ಧದ ಪಂದ್ಯದಲ್ಲಿ ಮತ್ತೊಂದು ವಿಶ್ವದಾಖಲೆ ನಿರ್ಮಿಸುವ ನಿರೀಕ್ಷೆ ಇದೆ.
ಪ್ರಸ್ತುತ ಮಂಧಾನ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ 4,681 ರನ್ ಗಳಿಸಿದ್ದು, ಅತಿಹೆಚ್ಚು ರನ್ ಗಳಿಸಿದ ಮಹಿಳಾ ಆಟಗಾರರ ಪೈಕಿ 2ನೇ ಸ್ಥಾನದಲ್ಲಿದ್ದಾರೆ. 4,758 ರನ್ ಗಳಿಸಿರುವ ನ್ಯೂಜಿಲೆಂಡ್ನ ಸುಜಿ ಬೇಟ್ಸ್ ಅಗ್ರಸ್ಥಾನದಲ್ಲಿದ್ದಾರೆ. ಸುಜಿ ಬೇಟ್ಸ್ ದಾಖಲೆ ನುಚ್ಚುನೂರು ಮಾಡಲು ಮಂಧಾನ ಅವರಿಗೆ 74 ರನ್ಗಳ ಅಗತ್ಯವಿದೆ. ಹೀಗಾಗಿ ಟೀಂ ಇಂಡಿಯಾದ ಆರಂಭಿಕ ಆಟಗಾರ್ತಿ ಮಂಧಾನ ಅವರಿಂದು ಪಾಕ್ ವಿರುದ್ಧ 74 ರನ್ ಅಥವಾ ಅದಕ್ಕಿಂತ ಹೆಚ್ಚಿನ ರನ್ ಗಳಿಸಿದ್ರೆ, ಮಹಿಳಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲೂ ನಂ.1 ಆಟಗಾರ್ತಿಯಾಗಿ ಹೊರಹೊಮ್ಮಲಿದ್ದಾರೆ.