ಮುಂಬೈ, ಅ 01 (DaijiworldNews/SM): ಟೀಂ ಇಂಡಿಯಾದಲ್ಲಿ ಇತ್ತೀಚಿಗೆ ಆಲ್ ರೌಂಡರ್ ಪ್ರದರ್ಶನ ನೀಡುವ ಮೂಲಕ ಮಿಂಚುತ್ತಿದ್ದ ಹಾರ್ದಿಕ್ ಪಾಂಡ್ಯ ಮುಂದಿನ ಟಿ20 ವಿಶ್ವಕಪ್ ತನಕ ಆಡುವುದು ಅನುಮಾನ.
ಟೀಂ ಇಂಡಿಯಾದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಕಾರಣದಿಂದಾಗಿ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಮುಂದಿನ ಟಿ೨೦ ವಿಶ್ವಕಪ್ ತನಕ ಅವರು ಪಂದ್ಯಗಳಲ್ಲಿ ಕಾಣಿಸಿಕೊಳ್ಳುವುದು ಅನುಮಾನವೆನ್ನಲಾಗಿದೆ.
ಸದ್ಯ ಮುಂಬರುವ ಬಾಂಗ್ಲಾ ವಿರುದ್ಧದ ಟಿ-20 ಸರಣಿಯಿಂದ ಪಾಂಡ್ಯಾ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಬೆನ್ನು ನೋವಿನ ಸಮಸ್ಯೆಯಿಂದಲೇ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಪಾಂಡ್ಯ ಹೊರಗುಳಿದಿದ್ದರು. ಯುನೈಟೆಡ್ ಕಿಂಗ್ಡಮ್ ನಲ್ಲಿ ಅವರಿಗೆ ಚಿಕಿತ್ಸೆ ಪಡೆದಿದ್ದಾರೆ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ನಡೆದಿದ್ದ ಏಷ್ಯಾ ಕಪ್ ಸರಣಿ ವೇಳೆಯೂ ಪಾಂಡ್ಯ ಚಿಕಿತ್ಸೆಗೊಳಗಾಗಿದ್ದರು.